ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್, ಕಲಬುರಗಿ, ಬೆಳಗಾವಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಪಣಂಬೂರು, ಮಾಣಿ, ಶಿರಾಲಿ, ಗೇರುಸೊಪ್ಪ, ಪುತ್ತೂರು, ಕುಂದಾಪುರ, ಮಂಕಿ, ಸಿದ್ದಾಪುರ, ಕೊಟ್ಟಿಗೆಹಾರ, ಭಾಗಮಂಡಲ, ಕೊಲ್ಲೂರು, ಹೊನ್ನಾವರ, ಕ್ಯಾಸಲ್ರಾಕ್, ಮಂಗಳೂರು, ಕೋಟ, ಸುಳ್ಯ, ಮುಲ್ಕಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ.
ಆಗುಂಬೆ, ಜಯಪುರ, ಕಳಸ, ಶೃಂಗೇರಿ, ಕೊಪ್ಪ, ಕುಮಟಾ, ಸಕಲೇಶಪುರ, ಬನವಾಸಿ, ಗೋಕರ್ಣ, ಲೋಂಡಾ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ನಾಪೋಕ್ಲು, ಮೂರ್ನಾಡು, ಕಾರವಾರ, ಯಲ್ಲಾಪುರ, ಕೂಡಲಸಂಗಮ, ಮೂಡಿಗೆರೆ, ಆನವಟ್ಟಿ, ತ್ಯಾಗರ್ತಿ, ಎನ್ಆರ್ಪುರ, ಹಾಸನ, ಹಾರಂಗಿ, ತರೀಕೆರೆ, ತಿಪಟೂರು, ಶ್ರವಣಬೆಳಗೊಳ, ಕುಶಾಲನಗರದಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ
ಬೆಂಗಳೂರಿನಲ್ಲಿ ಗುರುವಾರದಿಂದ ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ