Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ. 14ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಗೊಷಿಸಲಾಗಿದೆ. ಕರಾವಳಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದ 14 ಜಿಲ್ಲೆಗಳಲ್ಲಿ ಒಂದು ವಾರ ಧಾರಾಕಾರ ಮಳೆ
ಮಳೆ
Image Credit source: Hindustan Times

Updated on: Aug 29, 2024 | 7:43 AM

ಕರ್ನಾಟಕದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಕೊಟ್ಟಿಗೆಹಾರ, ಆಗುಂಬೆ, ಲಿಂಗನಮಕ್ಕಿ, ಕದ್ರಾ, ಶಿರಾಲಿ, ಕೊಲ್ಲೂರು, ಸಿದ್ದಾಪುರ, ಗೇರುಸೊಪ್ಪ, ಕಾರವಾರ, ಲೋಂಡಾ, ಯಲ್ಲಾಪುರ, ಕೋಟ, ಕುಮಟಾ, ಮಂಕಿ, ಭಾಗಮಂಡಲ, ಜೋಯಿಡಾ, ಪೊನ್ನಂಪೇಟೆ, ಕಾರ್ಕಳ, ಗೋಕರ್ಣ, ಸುಳ್ಯ, ಕಾರ್ಕಳ, ಪುತ್ತೂರು, ಗೋಕರ್ಣದಲ್ಲಿ ಮಳೆಯಾಗಿದೆ.
ಸುಳ್ಯ, ಪುತ್ತೂರು, ಜಯಪುರ, ತ್ಯಾಗರ್ತಿ, ಸೋಮವಾರಪೇಟೆ, ಬೆಳ್ತಂಗಡಿ, ಬನವಾಸಿ, ಕಳಸ, ಧರ್ಮಸ್ಥಳ, ಸೈದಾಪುರ, ಮಂಠಾಳ, ಗಬ್ಬೂರು, ಆಲಮಟ್ಟಿ, ಸಂಕೇಶ್ವರ, ಸೇಡಂ, ದೇವರಹಿಪ್ಪರಗಿ, ಬಾಳೆಹೊನ್ನೂರು, ಎನ್​ಆರ್​ಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ

ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬರಗಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us