Karnataka Rains: ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ 7 ಸೆಂ.ಮೀ ಮಳೆಯಾಗಿದೆ, ಶಿವಾನಿ, ಆಲಮಟ್ಟಿ ಎಚ್ಎಂಎಸ್, ಹೊಸದುರ್ಗ, ಗುಬ್ಬಿ, ಶ್ರೀರಂಗಪಟ್ಟಣ, ತಾವರಗೇರಾ, ಸಿಂಧನೂರು, ಮುದಗಲ್, ಶೋರಾಪುರ, ಕುಡತಿನಿ, ಶ್ರವಣಬೆಳಗೊಳ, ಸುಳ್ಯ, ನಾರಾಯಣಪುರ, ಕವಡಿಮಟ್ಟಿ ಅರ್ಗ, ಹುಣಸಗಿ, ಇಳಕಲ್, ಬಾದಾಮಿ, ಜಾಲಹಳ್ಳಿ, ನಲ್ವತವಾಡ, ಪೊನ್ನಂಪೇಟೆ, ಭಾಗಮಂಡಲ, ಹುಣಸೂರು, ಕಮ್ಮರಡಿ, ಅರಕಲಗೂಡು, ಕೃಷ್ಣರಾಜಸಾಗರ, ಬೆಳ್ಳೂರು, ಬರಗೂರು, ಕುಣಿಗಲ್, ಗುತ್ತಲ್, ಬಿಳಗಿ, ಮಾನ್ವಿ, ಮಾಸ್ಕಿ, ಯಲಬುರ್ಗಾ, ಗಂಗಾವತಿ, ಭಾಲ್ಕಿ, ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣ, ಚನ್ನರಾಯಪಟ್ಟಣ, ಶಿವಮೊಗ್ಗ, ಬೆಂಗಳೂರು ನಗರ, ಬುಕ್ಕಪಟ್ಟಣ, ಸೋಮವಾರಪೇಟೆ, ಜಯಪುರ, ಯುಗಟಿ,ತಾಳಿಕೋಟೆ, ಗದಗ, ಬಸವನ ಬಾಗೇವಾಡಿ, ಹಾವೇರಿ, ಸಕಲೇಶಪುರ, ತುಮಕೂರು, ವಿರಾಜಪೇಟೆ, ಚಿತ್ರದುರ್ಗ, ಉತ್ತರಹಳ್ಳಿಯಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಕಾರವಾರದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗ್ಗೆಯಿಂದಲೇ ಅಲ್ಲಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ