Karnataka Rains: ವಾಯುಭಾರ ಕುಸಿತ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು, ಆರೆಂಜ್ ಅಲರ್ಟ್​

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ವಾಯುಭಾರ ಕುಸಿತ, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು, ಆರೆಂಜ್ ಅಲರ್ಟ್​
ಮಳೆ
Image Credit source: PTI

Updated on: Aug 17, 2025 | 7:54 AM

ಬೆಂಗಳೂರು, ಆಗಸ್ಟ್​ 15: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ(Rain) ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಗದಗದಲ್ಲಿ ಕೂಡ ಮಳೆಯಾಗಲಿದೆ.

ಆಳಂದ, ಹೊನ್ನಾವರ, ಉಡುಪಿ, ಕದ್ರಾ, ಕೋಟಾ, ಮಂಕಿ, ಚಿತ್ತಾಪುರ, ಕ್ಯಾಸಲ್​ರಾಕ್, ಬೆಳ್ತಂಗಡಿ, ಗೋಕರ್ಣ, ಸಿದ್ದಾಪುರ, ಕಲಬುರಗಿ, ಕಮಲಾಪುರ, ಸೇಡಂ, ಭಾಗಮಂಡಲ, ಕಾರವಾರ, ಯಲ್ಲಾಪುರ, ಕುಂದಾಪುರ, ಶಕ್ತಿನಗರ, ಚಿಂಚೋಳಿ, ಶೃಂಗೇರಿ, ಕಮ್ಮರಡಿ, ಗೇರುಸೊಪ್ಪ, ಸವಣೂರು, ಗೋಕಾಕ್, ಸೇಡಬಾಳ, ಜಯಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಜೋರು, ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕೊಪ್ಪ, ನಾಪೊಕ್ಲು, ಬೆಂಗಳೂರು ಕೆಐಎಎಲ್, ಬರಗೂರು, ಕಳಸ, ಜೋಯ್ಡಾ, ಮಾಣಿ, ರಾಯಚೂರು, ಗುತ್ತಲ್, ನರಗುಂದ, ಗದಗ, ಕುರ್ಡಿ, ಜೇವರ್ಗಿ, ಮಂಠಾಳ, ಶೋರಾಪುರ, ನಾರಾಯಣಪುರ, ಆಲಮಟ್ಟಿ, ಗಬ್ಬೂರು, ಮಾನ್ವಿ, ನಲ್ವತವಾಡ, ಯಡ್ರಾಮಿ, ಬೆಳ್ಳಟ್ಟಿ, ಸೋಮವಾರಪೇಟೆ, ಕೊಟ್ಟಿಗೆಹಾರ, ಲೋಕಾಪುರ, ಯಡ್ರಾಮಿ, ಸೋಮವಾರಪೇಟೆ, ಕೊಟ್ಟಿಗೆಹಾರ, ಜಗಳೂರು, ಕಡೂರು, ಚಿತ್ರದುರ್ಗದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 23.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 22.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.9ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​​ನಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Fri, 15 August 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us