Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

|

Updated on: May 26, 2024 | 8:58 AM

ಕಳೆದ ಎರಡು ವಾರಗಳಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ
ಮಳೆ
Image Credit source: Native Planet
Follow us on

ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಮುಲ್ಕಿ,ಉಡುಪಿ, ಕುಶಾಲನಗರ, ಕಳಸ, ಪಣಂಬೂರು, ಸಿದ್ದಾಪುರ, ಮಂಗಳೂರು, ಆಗುಂಬೆ, ತರೀಕೆರೆ, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ನಂಜನಗೂಡು, ಬಾಳೆಹೊನ್ನೂರು, ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಪ್ಪ, ಕಮ್ಮರಡಿ, ದೊಡ್ಡಬಳ್ಳಾಪುರ, ಚನ್ನಗಿರಿ, ಕುಂದಾಪುರ, ಹಾಸನ,ಬರಗೂರು, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.

ವಿರಾಜಪೇಟೆ, ಶ್ರೀರಂಗಪಟ್ಟಣ, ಬೆಳ್ಳೂರು, ಕೊಟ್ಟಿಗೆಹಾರ, ಶ್ರೀರಂಗಪಟ್ಟಣ, ಹೆಸರಘಟ್ಟ, ಹುಂಚದಕಟ್ಟೆ, ಸಿಂಧನೂರು, ಜಾಲಹಳ್ಳಿ, ರಾಣೆಬೆನ್ನೂರಿನಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ

ಹಿರಿಯೂರು, ಕೃಷ್ಣರಾಜಪೇಟೆ, ದಾವಣಗೆರೆ, ಅಜ್ಜಂಪುರ, ಮಾಗಡಿ, ಮೂರ್ನಾಡು, ಗುತ್ತಲ್, ಗಂಗಾವತಿ, ತೊಂಡೇಭಾವಿ, ಮದ್ದೂರು, ಯುಗಟಿ, ಭಾಗಮಂಡಲ, ಮಂಡ್ಯ, ಅರಕಲಗೂಡು, ನಾಗಮಂಗಲದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿಕ್ಕನಹಳ್ಳಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ