Karnataka Rains: ಕರ್ನಾಟಕದಲ್ಲಿ ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಮಳೆ

ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕಾಗಲಿದ್ದು 6ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಒಂದು ವಾರಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದಲ್ಲಿ ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಮಳೆ
ಮಳೆ
Image Credit source: Native Planet

Updated on: Sep 08, 2024 | 7:42 AM

ಕರ್ನಾಟಕದಲ್ಲಿ ಮುಂದಿನ ವಾರದಿಂದ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಗೋಕರ್ಣ, ಮಾಣಿ, ಪುತ್ತೂರು, ಕಾರ್ಕಳ, ಶಿರಾಲಿ, ಅಂಕೋಲಾ, ಬೆಳ್ತಂಗಡಿ, ಬೀದರ್, ಭಾಲ್ಕಿ, ಶೃಂಗೇರಿ, ಮಂಕಿ, ಉಡುಪಿ, ಕೋಟ, ಧರ್ಮಸ್ಥಳ, ಸಿದ್ದಾಪುರ, ಗಂಗಾವತಿ, ಪಣಂಬೂರು, ಮುನಿರಾಬಾದ್, ಯಡವಾಡ, ಬಾದಾಮಿ, ಕಮ್ಮರಡಿ, ಜಯಪುರ, ಕಳಸದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ:
Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆ

ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us