Karnataka Rains: ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಉಳಿದೆಡೆ ಸಾಧಾರಣ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rains: ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ಉಳಿದೆಡೆ ಸಾಧಾರಣ ಮಳೆ
ಮಳೆ
Image Credit source: PTI

Updated on: Jul 09, 2025 | 7:25 AM

ಬೆಂಗಳೂರು, ಜುಲೈ 09: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ(Rain)ಯಾಗಲಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕದ್ರಾ, ಆಗುಂಬೆ, ಸಿದ್ದಾಪುರ, ಯಲ್ಲಾಪುರ, ಧರ್ಮಸ್ಥಳ, ಕಮ್ಮರಡಿ, ಕಳಸ, ಬೆಳ್ತಂಗಡಿ, ಶಿರಾಲಿ, ಪುತ್ತೂರು, ಮೂಡಿಗೆರೆ, ಸೋಮವಾರಪೇಟೆ, ಸುಳ್ಯ, ಮಂಗಳೂರು, ಕುಮಟಾ, ಕಾರ್ಕಳ, ಮಾಣಿ, ನಾಪೋಕ್ಲು, ಕೊಪ್ಪ, ಕೊಟ್ಟಿಗೆಹಾರ, ಶೃಂಗೇರಿ, ಜಯಪುರ, ಕುಂದಾಪುರ, ಮಂಕಿ, ಶಕ್ತಿನಗರ, ಬೆಳಗಾವಿ, ಉಡುಪಿ, ಮುಂಡಗೋಡು, ಬಾಳೆಹೊನ್ನೂರು, ಆನವಟ್ಟಿ, ಅರಕಲಗೋಡು, ಎನ್​ಆರ್​ಪುರದಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ವರುಣನ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ

ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಮಂಗಳೂರು ಏರ್​​ಪೋರ್ಟ್​​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us