ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ
ಕರಾವಳಿ, ಮಲೆನಾಡನಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದರೆ ಮತ್ತೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣವಿದ್ದು, ಒಂದು ಹನಿ ಮಳೆ ಆಗಿಲ್ಲ.
ಬೆಂಗಳೂರು, ಜೂನ್ 27: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ (Rain) ಆರ್ಭಟ ಹೆಚ್ಚಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಇದು ಬೆಂಗಳೂರಿನಲ್ಲಿ (Bangaluru) ಜುಲೈ 1ರ ವರೆಗೆ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಮತ್ತು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ
ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ಕೆಲ ದಿನಗಳಿಂದ ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣವಿದ್ದು, ಒಂದು ಹನಿ ಮಳೆ ಆಗಿಲ್ಲ. ಎಲ್ಲೆಡೆ ತಂಪು ಗಾಳಿ ಬೀಸುತ್ತಿದೆ.
ಇದನ್ನೂ ಓದಿ: ತುಂಬಿ ಹರಿಯುತ್ತಿರುವ ಕುಮಾರಧಾರ, ನೇತ್ರಾವತಿ: ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ
ಕಾರವಾರದ ದೇವಬಾಗ್ ಅರಬ್ಬಿ ಸಮುದ್ರದಲ್ಲಿ ಗಾಳಿ ಮಳೆ ಅಬ್ಬರಕ್ಕೆ ಕಡಲ ಕೊರೆತ ಉಂಟಾಗಿದೆ. ದೇವಬಾಗ್ ರೆಸಾರ್ಟ್ನ 4 ಕಾಟೇಜ್ ಮನೆಗಳಿಗೆ ಹಾನಿ ಆಗಿದ್ದು, ಕಡಲ ಕೊರೆತದ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ.
ಜೋಗ ಜಲಪಾತಕ್ಕೆ ಮರುಕಳಿಸಿದ ಜೀವ ಕಳೆ
ಮಲೆನಾಡಿನ ಭಾಗದಲ್ಲಿ ಮುಂಗಾರು ಮಳೆ ಚುರುಕು ಹಿನ್ನಲ್ಲೆ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತಕ್ಕೆ ಜೀವ ಕಳೆ ಮರುಕಳಿಸಿದೆ. ಮಳೆ ಹಿನ್ನಲೆ ಮತ್ತೆ ಜೋಗ್ ಫಾಲ್ಸ್ನಲ್ಲಿ ನೀರು ಧುಮುಕುತ್ತಿದೆ. ಆ ಮೂಲಕ ಮತ್ತೆ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.
ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಜಿಲ್ಲೆಯಾದ್ಯಂತ ಜೂ.27ರಂದು ಶಾಲೆಗಳಿಗೆ ರಜೆ ಘೋಷಣೆ
ಕೆಲ ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಬಿಡುವು ಕೊಟ್ಟಿದ್ದ ವರುಣ ಇಂದು ಮತ್ತೆ ಸುರಿದಿದೆ. ಕಳೆದ 20 ನಿಮಿಷದಿಂದ ಜಿಟಿ ಜಿಟಿ ಮಳೆ ಆರಂಭವಾಗಿದೆ. ಮಳೆ ಹಿನ್ನಲೆ ವಾಣಿಜ್ಯ ನಗರಿ ಹುಬ್ಬಳ್ಳಿ ಥೇಟ್ ಮಲೆನಾಡಿನಂತಾಗಿದೆ. ಜಿಟಿ ಜಿಟಿ ಮಳೆಗೆ ಜನ ಜೀವನ ಅಸ್ತವ್ಯಸ್ತ ಆಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.