Karnataka Rains: ಬೆಂಗಳೂರಿಗೆ ಆರೆಂಜ್ ಅಲರ್ಟ್​, ಅಕ್ಟೋಬರ್ 23ರವರೆಗೂ ಮಳೆ

ದೀಪಾವಳಿವರೆಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Karnataka Rains: ಬೆಂಗಳೂರಿಗೆ ಆರೆಂಜ್ ಅಲರ್ಟ್​, ಅಕ್ಟೋಬರ್ 23ರವರೆಗೂ ಮಳೆ
ಮಳೆ
Image Credit source: PTI

Updated on: Oct 17, 2024 | 7:36 AM

ಬೆಂಗಳೂರಿನಲ್ಲಿ ಇಂದು ಸಂಜೆಯ ವೇಳೆಗೆ ಮತ್ತೆ ಮಳೆ ಶುರುವಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ವಿಜಯಪುರ, ಬೀದರ್​ನಲ್ಲಿ ಮಳೆಯಾಗಲಿದೆ. ಜಿಕೆವಿಕೆ, ಕುಂದಾಪುರ, ಯಡ್ವಾಡ, ಹೆಸರಘಟ್ಟ, ಬೆಳ್ಳೂರು, ಗುಬ್ಬಿ, ಧಾರವಾಡ, ಕಲಬುರಗಿ, ರಾಯಲ್ಪಾಡು, ಕುಣಿಗಲ್, ಹಳಿಯಾಳ, ಅಂಕೋಲಾ, ಕ್ಯಾಸಲ್​ರಾಕ್, ಮಂಕಿ, ಧಾರವಾಡ, ಜೇವರ್ಗಿ, ಜಯಪುರ, ದೊಡ್ಡಬಳ್ಳಾಪುರ, ಮಧುಗಿರಿ, ಕುಮಟಾ, ಧರ್ಮಸ್ಥಳ, ಕಾರವಾರ, ಸಿದ್ದಾಪುರ, ಪುತ್ತೂರು, ಸೇಡಬಾಳ, ಬಿಳಗಿ, ಮಾಗಡಿಯಲ್ಲಿ ಮಳೆಯಾಗಿದೆ.

ಕೊಲ್ಲೂರು, ಉಡುಪಿ, ಕಾರ್ಕಳ, ಬೆಳ್ತಂಗಡಿ, ಹುಬ್ಬಳ್ಳಿ, ಬೈಲಹೊಂಗಲ, ಕಮಲಾಪುರ, ಕಮಲಾಪುರ, ನರಗುಂದ, ತಿಪಟೂರು, ಬಂಡೀಪುರ, ಹುಬ್ಬಳ್ಳಿ, ಬಂಡೀಪುರ, ಚಿಂತಾಪುಣಿ, ಕಡೂರು, ಹೊನ್ನಾವರ, ಕೋಟ, ಮಾಣಿ, ಕುಂದಗೋಳ, ಚಿಂಚೋಳಿ, ಗದಗ, ರಾಯಭಾಗ, ಸಂಕೇಶ್ವರ, ಮಿಡಿಗೇಶಿ, ದೇವನಹಳ್ಳಿ, ಬರಗೂರು, ಚನ್ನಗಿರಿ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅ.20ರವರೆಗೆ ಭಾರಿ ಮಳೆ, ಆರೆಂಜ್ ಅಲರ್ಟ್​

ಚಿಕ್ಕಬಳ್ಳಾಪುರ, ಅಜ್ಜಂಪುರ, ರಾಮನಗರ, ಎನ್​ಆರ್​ಪುರ, ಭದ್ರಾವತಿ, ನಾಯಕನಹಟ್ಟಿ, ಬೇಲೂರು, ಪೊಲ್ಲಂಪೇಟೆ, ಕೊಟ್ಟಿಗೆಹಾರ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.04 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 22.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 23.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us