ಎಚ್ಚರ…ಎಚ್ಚರ! ಮುಂದಿನ 6 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Oct 11, 2024 | 5:41 PM

ಬೆಂಗಳೂರಿನಲ್ಲಿ ಹವಾಮಾನ ಇಲಾಖೆ ತಜ್ಞ ಸಿಎಸ್​ ಪಾಟೀಲ್ ಮಾತನಾಡಿದ್ದು, ಪೂರ್ವ ಅರಬ್ಬಿ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಇಂದಿನಿಂದ ಕರ್ನಾಟಕದ ವಿವಿಧೆಡೆ ಬಹುತೇಕ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಕ್ಟೋಬರ್ 11 ರಿಂದ 16 ರವರೆಗೆ ಮಳೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಎಚ್ಚರ...ಎಚ್ಚರ! ಮುಂದಿನ 6 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಎಚ್ಚರ...ಎಚ್ಚರ..ಮುಂದಿನ 6 ದಿನ ಕರ್ನಾಟಕದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Follow us on

ಬೆಂಗಳೂರು, ಅಕ್ಟೋಬರ್​​ 11: ಪೂರ್ವ ಅರಬ್ಬಿ ಸಮುದ್ರ ತೀರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ ಆರು ದಿನ ಕರ್ನಾಟಕದಲ್ಲಿ ಮಳೆಯಾಗಲಿದೆ (rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಹುತೇಕ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದಿನಿಂದ ಅಕ್ಟೋಬರ್ 16 ರವರೆಗೆ ಮಳೆ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಈ ಬಗ್ಗೆ ಟಿವಿ9 ಗೆ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್​ ಪ್ರತಿಕ್ರಿಯಿಸಿದ್ದು, ಪೂರ್ವ ಅರಬ್ಬಿ ಸಮುದ್ರ, ಕರ್ನಾಟಕ, ಗೋವಾ, ಕರಾವಳಿ ತೀರದಲ್ಲಿ ತೀವ್ರವಾಗಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಲ್ಲಿ  ಅಕ್ಟೋಬರ್​ 11 ರಿಂದ 14 ರವರೆಗೆ ಸಾಧಾರಣ ಮಳೆ ಮತ್ತು 15 ಮತ್ತು 16 ರಂದು ವ್ಯಾಪಕ ಮಳೆ ಆಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದ ಈ 16 ಜಿಲ್ಲೆಗಳಲ್ಲಿ ಅ.15ರವರೆಗೆ ವಿಪರೀತ ಮಳೆ

ಬೆಳಗಾವಿ, ಹಾವೇರಿ, ಗದಗ, ಚಿತ್ರದುರ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಮನಗರದಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಯಲ್ಲೋ ಅಲರ್ಟ್ ಘೋಷಣೆ

ದಕ್ಷಿಣ ಭಾಗದ ಕೆಲವು ಜಿಲ್ಲೆಗಳಲ್ಲಿ ಅಕ್ಟೊಬರ್ 12 ರಂದು ಭಾರೀ ಮಳೆ ಸಾಧ್ಯತೆ ಇದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Karnataka Rains: ಮುಂದಿನ ಒಂದು ವಾರ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮಳೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವ್ಯಾಪ್ತಿಯಲ್ಲಿನ ಚಾರ್ಮಾಡಿಘಾಟ್‌ ರಸ್ತೆಯಲ್ಲಿ ಮಳೆಯಿಂದ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿತ್ತು. ರಸ್ತೆಮೇಲೆ ಹೊಳೆಯಂತೆ ನೀರು ಹರಿಯುತ್ತಿದ್ದ ದೃಶ್ಯ ಬೆಚ್ಚಿಬೀಳಿಸುವಂತಿತ್ತು. ಸಾಲು ಸಾಲಾಗಿ ಗುಡ್ಡಗಳು ಕುಸಿದಿದ್ದವು. ಟ್ರಾಫಿಕ್ ಜಾಮ್ ಉಂಟಾಗಿ ನೂರಾರು ವಾಹನಗಳು ಸಾಲುಗಟ್ಟಿನಿಲ್ಲುವಂತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:18 pm, Fri, 11 October 24