Karnataka Rains: ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಜೋರು, ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕಾಗಲಿದ್ದು, ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಆಗಸ್ಟ್​ 19ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗದಲ್ಲಿ ಮಳೆಯಾಗಲಿದೆ.

Karnataka Rains: ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಜೋರು, ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Aug 14, 2025 | 7:26 AM

ಬೆಂಗಳೂರು, ಆಗಸ್ಟ್​ 14: ಕರ್ನಾಟಕದಾದ್ಯಂತ ಇಂದಿನಿಂದ ಮಳೆ(Rain) ಚುರುಕಾಗಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿಯಲ್ಲಿ ಆಗಸ್ಟ್​ 19ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಗದಗದಲ್ಲಿ ಮಳೆಯಾಗಲಿದೆ.ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ದೇಶದಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು ಕರ್ನಾಟಕದಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ.

ಆಳಂದ, ಆಗುಂಬೆ, ಮಂಕಿ, ಕುಂದಾಪುರ, ಶಕ್ತಿನಗರ, ಕಕ್ಕೇರಿ, ಕುಮಟಾ, ಗೋಕರ್ಣ, ಸಿದ್ದಾಪುರ, ಕದ್ರಾ, ಗೇರುಸೊಪ್ಪ, ಮಂಗಳೂರು, ಕಾರ್ಕಳ, ಗುತ್ತಲ್, ಜಗಳೂರು, ಚನ್ನಗಿರಿ, ದಾವಣಗೆರೆ, ಹೊನ್ನಾವರ, ಬೆಳ್ತಂಗಡಿ, ಉಪ್ಪಿನಂಗಡಿ, ಮಾಣಿ, ಬನವಾಸಿ, ಸವಣೂರು, ಗಾಣಗಾಪುರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರಿನಲ್ಲಿ ಆ.19ರವರೆಗೂ ಮಳೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಹರಪನಹಳ್ಳಿ, ಕಳಸ, ತರೀಕೆರೆ, ಹುಂಚದಕಟ್ಟೆ, ಹೊಳಲ್ಕೆರೆ, ಭರಮಸಾಗರ, ಬಂಟವಾಳ, ಉಡುಪಿ, ಕೋಟಾ, ಮಂಗಳೂರು, ಸುಳ್ಯ, ಅಂಕೋಲಾ, ಮುಂಡಗೋಡು, ಕಿರವತ್ತಿ, ಲಕ್ಷ್ಮೇಶ್ವರ, ಅಣ್ಣಿಗೆರೆ, ಕುಂದಗೋಳ, ಶಿರಹಟ್ಟಿ, ಬೆಳ್ಳಟ್ಟಿ, ಲೋಂಡಾ,ಹಿರೆಕೆರೂರು, ರಾಯಚೂರು, ಹುಣಸಗಿ, ತಾಳಿಕೋಟೆ, ಕುರ್ಡಿ, ಇಂಡಿ, ಹಿರಿಯೂರು, ಶೃಂಗೇರಿ, ಟಿಜಿಹಳ್ಳಿ, ಆನವಟ್ಟಿ, ಬರಗೂರು, ಕುಣಿಗಲ್, ಗುಬ್ಬಿ, ಎನ್​ಆರ್​ಪುರ, ಅಜ್ಜಂಪುರ, ರಾಯಲ್ಪಾಡು, ಕಿರವತ್ತಿ, ಕೊಪ್ಪ, ಭಾಗಮಂಡಲ, ಪರಶುರಾಂಪುರ, ಹೊನ್ನಾಳಿ, ಕೊಪ್ಪ, ಕಿಬ್ಬನಹಳ್ಳಿ, ಗೌರಿಬಿದನೂರು, ಜಯಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕೂಡ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಎಚ್​​ಎಎಲ್​​ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 23.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ