Karnataka Rains: ಬೆಂಗಳೂರಿನಲ್ಲಿ ಆಗಸ್ಟ್ 9ರವರೆಗೂ ಮಳೆ, ಕರ್ನಾಟಕದ 29 ಜಿಲ್ಲೆಗಳಿಗೆ ಅಲರ್ಟ್​

ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಹೆಚ್ಚಿನ ಮಳೆಯಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರಿನಲ್ಲಿ ಆಗಸ್ಟ್ 9ರವರೆಗೂ ಮಳೆ, ಕರ್ನಾಟಕದ 29 ಜಿಲ್ಲೆಗಳಿಗೆ ಅಲರ್ಟ್​
ಮಳೆ
Image Credit source: PTI

Updated on: Aug 05, 2025 | 7:20 AM

ಬೆಂಗಳೂರು, ಆಗಸ್ಟ್​ 05: ಕೇವಲ ಬೆಂಗಳೂರು ಮಾತ್ರವಲ್ಲ ಕರ್ನಾಟಕದ 29 ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಯಲ್ಪಾಡು, ಆಗುಂಬೆ, ಜಿಕೆವಿಕೆ, ಕೃಷ್ಣರಾಜಪೇಟೆ, ಹೊಸಕೋಟೆ, ಗೌರಿಬಿದನೂರು, ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲದಲ್ಲಿ ಮಳೆಯಾಗಿದೆ.

ಬಂಟವಾಳ, ಟಿಜಿ ಹಳ್ಳಿ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್​​ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್​​ಎಎಲ್​, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ದೇವರಹಿಪ್ಪರಗಿ, ಕ್ಯಾಸಲ್​ರಾಕ್, ಬೇಳೂರು, ಆನವಟ್ಟಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 27ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

ಬೆಂಗಳೂರಿನಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದೆ. ಸೋಮವಾರ ಕೂಡ ಸಂಜೆಯೇ ಶುರುವಾದ ಮಳೆ ತಡರಾತ್ರಿವರೆಗೂ ಬಂದಿದೆ. ಎಚ್​​ಎಎಲ್​​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us