AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್​ ಅಲರ್ಟ್​

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್​ ಅಲರ್ಟ್​
ಮಳೆImage Credit source: The Hindu
ನಯನಾ ರಾಜೀವ್
|

Updated on: May 17, 2024 | 7:37 AM

Share

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗಾಳಿ ಬೀಸಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 10 ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರಗಳ ಕಾಲ ವಿಪರೀತ ಮಳೆ

ಚನ್ನಗಿರಿ,ಪೊನ್ನಂಪೇಟೆ, ಕೊಟ್ಟೂರು, ಕುಶಾಲನಗರ, ಮೂರ್ನಾಡು, ಚಾಮರಾಜನಗರ, ಕಳಸ, ಕಡುತಿನಿ, ಬೆಳ್ತಂಗಡಿ,ಶಿರಾಲಿ, ಕೊಳ್ಳೇಗಾಲ, ಹುಣಸೂರು, ಹುಂಚದಕಟ್ಟೆ, ಸಕಲೇಶಪುರದಲ್ಲಿ ಮಳೆಯಾಗಿದೆ. ಹೊನ್ನಾವರದಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.7ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ