AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್

ಹವಾಮಾನ ಇಲಾಖೆ ರಾಜ್ಯದಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 1 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ಕೆಲವು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆ ಇದೆ.

Karnataka Rains: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್
ಮಳೆ
ವಿವೇಕ ಬಿರಾದಾರ
|

Updated on:Aug 27, 2025 | 1:06 PM

Share

ಬೆಂಗಳೂರು, ಆಗಸ್ಟ್​ 27: ಇಂದಿನಿಂದ (ಆ.27) ರಾಜ್ಯಾದ್ಯಂತ ಮಳೆ (Rain) ಹೆಚ್ಚಾಗಲಿದ್ದು, ಸೆಪ್ಟೆಂಬರ್​ 01ವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 30 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು, ಒತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆಗಸ್ಟ್​ 29ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು (ಆ.27) ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಎಷ್ಟಿರಲಿದೆ ಗಾಳಿಯ ವೇಗ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್​ 28 ರವರೆಗೆ ಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿಮೀ ಇರಲಿದೆ. ಇನ್ನು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್​ 29ರವರೆಗೆ ಗಾಳಿಯ ವೇಗವು ಗಂಟೆಗೆ 30-40 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್​ 28 ರಿಂದ ಆಗಸ್ಟ್​ 30ರ ವರೆಗೂ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿಯಷ್ಟು ಇರುವ ಸಾಧ್ಯತೆ ಇದೆ. ಗಾಳಿ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಆಗಸ್ಟ್​ 28 ರಿಂದ ಆಗಸ್ಟ್​ 30ರ ವರೆಗೂ ಮೋಡಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​ನಷ್ಟು ದಾಖಲಾಗಲಿದೆ. ಗಾಳಿಯ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:40 am, Wed, 27 August 25

ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ