Karnataka Rains: ಕರ್ನಾಟಕದ ಕರಾವಳಿಗೆ ರೆಡ್ ಅಲರ್ಟ್​, ಉತ್ತರ, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನುಳಿದಂತೆ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿಗೆ ರೆಡ್ ಅಲರ್ಟ್​, ಉತ್ತರ, ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆ
ಮಳೆ
Image Credit source: PTI

Updated on: Aug 29, 2025 | 7:22 AM

ಬೆಂಗಳೂರು, ಆಗಸ್ಟ್​ 29: ಕರ್ನಾಟಕದಾದ್ಯಂತ ಗಣೇಶ ಚತುರ್ಥಿಯ ದಿನದಿಂದಲೇ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ನೀಡಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆ(Rain)ಯಾಗಲಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದಂತೆ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಗೇರುಸೊಪ್ಪ, ಹೊನ್ನಾವರ, ಅಂಕೋಲಾ, ಮಂಗಳೂರು, ಕಾರವಾರ, ಕದ್ರಾದಲ್ಲಿ ಭಾರಿ ಮಳೆಯಾಗಿದೆ. ಜೇವರ್ಗಿ, ಔರಾದ್, ಆಗುಂಬೆ, ಜೋಯ್ಡಾ, ಯಡ್ರಾಮಿ, ಸುಳ್ಯ, ಸಿದ್ದಾಪುರ, ಶಕ್ತಿನಗರ, ಮಂಕಿ, ಮಾಣಿ, ಕುಮಟಾ, ಕಾರ್ಕಳ, ಬೀದರ್, ಬಂಟವಾಳ, ನಾರಾಯಣಪುರ, ನಲ್ವತವಾಡ, ಉಪ್ಪಿನಂಗಡಿ, ಮೂಡುಬಿದಿರೆ, ಮಂಠಾಳ, ಲೋಂಡಾ, ಕೋಟಾ, ಗದಗ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ:
Karnataka Rains: ಇಂದಿನಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಜೋರು, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್​

ಶಾಹಪುರ, ಕೂಡಲಸಂಗಮ, ಕೆಂಭಾವಿ, ಕಮ್ಮರಡಿ, ಗೋಕರ್ಣ, ಭಾಗಮಂಡಲ, ಶೃಂಗೇರಿ, ಶೋರಾಪುರ, ಮುಲ್ಕಿ, ಮುದ್ದೇಬಿಹಾಳ, ಮಂಗಳೂರು, ಕಕ್ಕೇರಿ, ಹುಣಸಗಿ, ಹುಂಚದಕಟ್ಟೆ, ಶೋರಾಪುರ, ಭಾಲ್ಕಿ, ಬೆಳ್ತಂಗಡಿ, ಯಲ್ಲಾಪುರ, ದೇವರಹಿಪ್ಪರಗಿ, ಚಿತ್ತಾಪುರ, ಸೋಮವಾರಪೇಟೆ, ಸೇಡಂ, ಮಾನ್ವಿ, ಕಮಲಾಪುರ, ಹುನಗುಂದ, ಕೊಪ್ಪ, ಬಾದಾಮಿ, ವಿಜಯಪುರ, ಹೊಸಪೇಟೆ, ನರಗುಂದ, ನಾಪೊಕ್ಲು, ರಾಯಚೂರು, ಸೈದಾಪುರ, ಆನವಟ್ಟಿ, ಕುಷ್ಟಗಿ, ನೆಲೋಗಿ, ಕೋಲಾರ, ಕುಶಾಲನಗರ, ಮಸ್ಕಿ, ಹಗರಿಬೊಮ್ಮನಹಳ್ಳಿ, ಚಿಂಚೋಳಿ, ಚಿತ್ರದುರ್ಗ, ಭರಮಸಾಗರ, ಭದ್ರಾವತಿ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಬಹುತೇಕ ಕಡೆ ಬುಧವಾರ ಸಂಜೆ ಭಾರಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಹೊನ್ನಾವರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us