Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್​ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಆಗುಂಬೆ, ಸೋಮವಾರಪೇಟೆ, ಸಿದ್ದಾಪುರ, ಶೃಂಗೇರಿ, ಭಾಗಮಂಡಲ, ಜಯಪುರ, ಕುಂದಾಪುರ, ಮಂಕಿ, ಕೋಟಾ, ಮೂಡಬಿದಿರೆ, ಬೆಳ್ತಂಗಡಿ, ಕೊಪ್ಪ, ನಾಪೋಕ್ಲು, ಉಪ್ಪಿನಂಗಡಿ, ಧರ್ಮಸ್ಥಳ, ಸುಳ್ಯ, ಪುತ್ತೂರು, ಕಾರ್ಕಳ, ಕುಮಟಾ, ಹುಮ್ನಾಬಾದ್, ಕಮ್ಮರಡಿ, ಕಳಸ, ಕೊಟ್ಟಿಗೆಹಾರ, ಬೀದರ್, ಮಾಣಿ, ಹಾರಂಗಿ, ಹುಂಚದಕಟ್ಟೆ, ಕೋಣನೂರು, ಎನ್​ಆರ್​ ಪುರ, ಮಂಗಳೂರು, ಗೇರುಸೊಪ್ಪ, ನಿಪ್ಪಾಣಿ, ಅಜ್ಜಂಪುರ, ತರೀಕೆರೆ, ಬಂಡೀಪುರ, ಭದ್ರಾವತಿ, ಬೇಲೂರು, ಬರಗೂರು, ಅಂಕೋಲಾ, ಲೋಕಾಪುರ, ಜೇವರ್ಗಿ, ಆಲಮಟ್ಟಿ, ಬಬಲೇಶ್ವರ, ಚಿಕ್ಕೋಡಿ, ಸೇಡಬಾಳ, ಯಾದಗಿರಿಯಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ
ಮಳೆ
Image Credit source: PTI

Updated on: May 29, 2025 | 7:29 AM

ಬೆಂಗಳೂರು, ಮೇ 29: ಆರ್ಭಟದೊಂದಿಗೆ ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ರೆಡ್ ಅಲರ್ಟ್​ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​, ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಆಗುಂಬೆ, ಸೋಮವಾರಪೇಟೆ, ಸಿದ್ದಾಪುರ, ಶೃಂಗೇರಿ, ಭಾಗಮಂಡಲ, ಜಯಪುರ, ಕುಂದಾಪುರ, ಮಂಕಿ, ಕೋಟಾ, ಮೂಡಬಿದಿರೆ, ಬೆಳ್ತಂಗಡಿ, ಕೊಪ್ಪ, ನಾಪೋಕ್ಲು, ಉಪ್ಪಿನಂಗಡಿ, ಧರ್ಮಸ್ಥಳ, ಸುಳ್ಯ, ಪುತ್ತೂರು, ಕಾರ್ಕಳ, ಕುಮಟಾ, ಹುಮ್ನಾಬಾದ್, ಕಮ್ಮರಡಿ, ಕಳಸ, ಕೊಟ್ಟಿಗೆಹಾರ, ಬೀದರ್, ಮಾಣಿ, ಹಾರಂಗಿ, ಹುಂಚದಕಟ್ಟೆ, ಕೋಣನೂರು, ಎನ್​ಆರ್​ ಪುರ, ಮಂಗಳೂರು, ಗೇರುಸೊಪ್ಪ, ನಿಪ್ಪಾಣಿ, ಅಜ್ಜಂಪುರ, ತರೀಕೆರೆ, ಬಂಡೀಪುರ, ಭದ್ರಾವತಿ, ಬೇಲೂರು, ಬರಗೂರು, ಅಂಕೋಲಾ, ಲೋಕಾಪುರ, ಜೇವರ್ಗಿ, ಆಲಮಟ್ಟಿ, ಬಬಲೇಶ್ವರ, ಚಿಕ್ಕೋಡಿ, ಸೇಡಬಾಳ, ಯಾದಗಿರಿಯಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಜೂನ್ 2ರವರೆಗೆ ಮಳೆಯ ಅಬ್ಬರ
ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು
ಅವೈಜ್ಞಾನಿಕವಾಗಿ ಸವಾರರನ್ನು ತಡೆಯಬೇಡಿ: ಪೊಲೀಸರಿಗೆ ಪರಮೇಶ್ವರ್ ಎಚ್ಚರಿಕೆ

ಮತ್ತಷ್ಟು ಓದಿ: Karnataka Rains: ಇಂದು ಕರ್ನಾಟಕದ ಕರಾವಳಿ, ಕೊಡಗು, ಶಿವಮೊಗ್ಗ ಸೇರಿ ಹಲವೆಡೆ ಭಾರಿ ಮಳೆ

ಹೊನ್ನಾವರದಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ನಗರದಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇಡೀ ದೇಶದ ಹವಾಮಾನ ಹೇಗಿದೆ?
ಪಶ್ಚಿಮ ಬಂಗಾಳ, ಹಿಮಾಚಲಪ್ರದೇಶ, ಉತ್ತರಾಖಂಡ, ಲಕ್ಷದ್ವೀಪ, ಅಂಡಮಾನ್, ನಿಕೋಬಾರ್, ಒಡಿಶಾ, ಜಾರ್ಖಂಡ್​, ಮಧ್ಯ ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ತ್ರಿಪುರಾ, ಅಸ್ಸಾಂ, ಮೇಘಾಲಯ, ಛತ್ತೀಸ್​ಗಢ, ಉತ್ತರ ಪ್ರದೇಶ, ಬಿಹಾರ, ಕರ್ನಾಟಕ, ತಮಿಳುನಾಡು,ಆಂಧ್ರಪ್ರದೇಶ, ಪುದುಚೇರಿ, ಕಾರೈಕಲ್​ನಲ್ಲಿ ಇಂದು ಭಾರಿ ಮಳೆಯಾಗಲಿದೆ.

 

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ