Karnataka Rains: ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್​ ಅಲರ್ಟ್​

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರ್ನಾಟಕಕ್ಕೆ ವರುಣ ದೇವ ಕೃಪೆ ತೋರಿದ್ದಾನೆ, ಕಳೆದ ಒಂದು ವಾರದಿಂದ ಒಂದಲ್ಲಾ ಒಂದು ಕಡೆ ಮಳೆಯಾಗುತ್ತಲೇ ಇದೆ. ಮೇ ತಿಂಗಳ ಅಂತ್ಯದಲ್ಲಿ ಮುಂಗಾರು ಆಗಮಿಸುವ ನಿರೀಕ್ಷೆ ಇದೆ. ಅದಕ್ಕೂ ಮುನ್ನವೇ ಎಲ್ಲೆಡೆ ಮಳೆಯಾಗುತ್ತಿದೆ. ಉಡುಪಿ, ಉತ್ತರ ಕನ್ನಡ, ಕೊಡಗು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್​ ಅಲರ್ಟ್​
ಮಳೆ
Image Credit source: The Weather Channel

Updated on: May 21, 2024 | 7:29 AM

ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡದಲ್ಲೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೊಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗಲಿದ್ದು, ಮೇ 24ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಲಿದೆ.

ಯಲ್ಲಾಪುರ, ಎಚ್​ಡಿಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಹಗರಿಬೊಮ್ಮನಹಳ್ಳಿ, ಹೊಸದುರ್ಗಾ, ಚನ್ನರಾಯಪಟ್ಟಣ, ಶಿವಮೊಗ್ಗ, ದಾವಣಗೆರೆ, ಮಾಣಿ, ಸಂತೆಬೆನ್ನೂರು, ಹರಪನಹಳ್ಳಿಯಲ್ಲಿ ಮಳೆಯಾಗಿದೆ.

ಮಂಕಿ, ನಿಪ್ಪಾಣಿ, ಬರಗೂರು, ಸಂಡೂರು, ಹೊಸಕೋಟೆ, ಪರಶುರಾಂಪುರ, ಕೂಡ್ಲಿಗಿ, ಸುಳ್ಯ, ಧರ್ಮಸ್ಥಳ, ಕದ್ರಾ, ಕಡೂರು, ಎನ್​ಆರ್​ಪುರ, ಉಪ್ಪಿನಂಗಡಿ, ಹಳಿಯಾಳ, ಮೂಡಿಗೆರೆ, ಮುಂಡಗೋಡು, ಸಿಂಧನೂರು, ಹುಣಸೂರು, ಕೊಟ್ಟೂರು, ಕೃಷ್ಣರಾಜಪೇಟೆ, ಗೌರಿಬಿದನೂರು, ಹೆಬ್ಬೂರು, ನಾಪೋಕ್ಲು, ನಾಗಮಂಗಲ, ಕುಶಾಲನಗರ, ಚಿತ್ರದುರ್ಗ, ಮಾಗಡಿ, ಬೇಲೂರು, ವಿರಾಜಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 23ರವರೆಗೆ ಮಹಾ ಮಳೆ

ಕಲಬುರಗಿಯಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 20.6ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:28 am, Tue, 21 May 24