Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆ

ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿದಂತೆ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಧಾರಾಕಾರ ಮಳೆ
ಹವಾಮಾನImage Credit source: Farheen Hussain( Twitter)
Follow us
ನಯನಾ ರಾಜೀವ್
|

Updated on:Jul 06, 2023 | 7:28 AM

ರಾಜ್ಯದ್ಯಂತ ಮುಂಗಾರು ಚುರುಕುಪಡೆಯುತ್ತಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕಾರವಾರ, ಹೊನ್ನಾವರ, ಶಿರಾಲಿ, ಮುಲ್ಕಿ, ಬೆಳ್ತಂಗಡಿ, ಕಾರ್ಕಳ, ಕೊಲ್ಲೂರು, ಗೇರುಸೊಪ್ಪ, ಕುಮಟಾ, ಮಂಗಳೂರು, ಮಾಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಮಳೆಯಾಗಿದೆ.

ಪಣಂಬೂರು, ಧರ್ಮಸ್ಥಳ, ಪುತ್ತೂರು, ಕೋಟ, ಸಿದ್ದಾಪುರ, ಮುಧೋಳ,ಮಂಕಿ, ಗೋಕರ್ಣ,ನಿರ್ಣಾ, ಉಪ್ಪಿನಂಗಡಿ, ಬೇಲಿಕೇರಿ, ಕದ್ರಾ, ಕೊಟ್ಟಿಗೆಹಾರ, ಅಡಕಿ, ಭಾಗಮಂಡಲ, ಅಂಕೋಲಾ, ಕ್ಯಾಸಲ್​ರಾಕ್, ಕಮ್ಮರಡಿಯಲ್ಲಿ ಭಾರಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರಿ ಮಳೆ: ರೆಡ್ ಅಲರ್ಟ್​ ಘೋಷಣೆ

ಮಂಚಿಕೆರೆ, ಸುಬ್ರಹ್ಮಣ್ಯ, ಶೃಂಗೇರಿ, ಜಯಪುರ, ಲಿಂಗನಮಕ್ಕಿ, ಸಿದ್ದಾಪುರ, ಸುಳ್ಯ, ಬೀದರ್, ದೇವದುರ್ಗ, ಕಳಸ, ಕೊಪ್ಪ, ವಿರಾಜಪೇಟೆ, ರಾಯಲ್ಪಾಡು, ಮಹಾಗಾವ್, ಶ್ರೀಮಂಗಲ, ನಾಪೋಕ್ಲು, ತಾಳಗುಪ್ಪ, ಹುಂಚದಕಟ್ಟೆ, ಮಾನ್ವಿ, ಮಸ್ಕಿ, ರಾಜೇಶ್ವರ, ಹಳಿಯಾಳ, ತ್ಯಾಗರ್ತಿ, ಶೋರಾಪುರ, ನಾಯಕನಹಟ್ಟಿ, ಅಕ್ಕಿಆಲೂರು, ಕಲಘಟಗಿ, ಸೈದಾಪುರ, ಕಕ್ಕೇರಿ, ರಾಯಚೂರು, ಹೊಸಕೋಟೆ, ಪಾವಗಡ, ಹಾರಂಗಿ, ಶನಿವಾರಸಂತೆ, ಬಂಡೀಪುರ, ಶಿವಮೊಗ್ಗ, ಚಿಕ್ಕಮಗಳೂರು, ಭದ್ರಾವತಿ, ಹರಪನಹಳ್ಳಿಯಲ್ಲಿ ಮಳೆಯಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡದಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45-55 ಕಿ.ಮೀ ಇಂದ 65 ಕಿ.ಮೀ ವರೆಗೂ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:27 am, Thu, 6 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್