Karnataka Rains: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​

ಕರ್ನಾಟಕದಲ್ಲಿ ಮಳೆಯ ಅಬ್ಬರ ಇಂದಿನಿಂದ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ. 7 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದ್ದರೂ ರೆಡ್ ಹಾಗೂ ಆರೆಂಜ್ ಅಲರ್ಟ್​ ಇರುವ ಜಿಲ್ಲೆಗಳಿಗಿಂತ ಕಡಿಮೆ ಇರಲಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​
ಮಳೆ
Image Credit source: PTI

Updated on: May 21, 2025 | 7:22 AM

ಬೆಂಗಳೂರು, ಮೇ 21: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ(Rain)ಯ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಾದ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಕಡೆ ವರುಣನ ಆರ್ಭಟ ಹೆಚ್ಚಾಗಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಂದಿನಿಂದ ಮಳೆ ಚುರುಕಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದ್ದರೂ ರೆಡ್ ಹಾಗೂ ಆರೆಂಜ್ ಅಲರ್ಟ್​ ಇರುವ ಜಿಲ್ಲೆಗಳಿಗಿಂತ ಕಡಿಮೆ ಇರಲಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾಗಿದೆ.ಕಾರ್ಕಳ, ಯಲ್ಲಾಪುರ, ಮಂಗಳೂರು, ಗುತ್ತಲ್, ಪಣಂಬೂರು, ಕಳಸ, ಎಂಪ್ರಿ, ಕೋಲಾರ, ಮುಲ್ಕಿ, ಟಿಜಿ ಹಿಲ್ಸ್​ನಲ್ಲಿ ಹೆಚ್ಚು ಮಳೆಯಾಗಿದೆ.

ಇದನ್ನೂ ಓದಿ
ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ

ಕೊಟ್ಟಿಗೆಹಾರ, ಮಂಗಳೂರು, ಯಲಬುರ್ಗಾ, ಕುಣಿಗಲ್, ಭಾಗಮಂಡಲ,ಬೆಂಗಳೂರು ಎಚ್​ಎಎಲ್, ಪುತ್ತೂರು, ಮಾಣಿ, ಕುಷ್ಟಗಿ, ನೆಲಮಂಗಲ, ಬೆಂಗಳೂರು ನಗರ, ದಾವಣಗೆರೆ, ಗಬ್ಬೂರು, ಗುರುಮಿಟ್ಕಲ್, ಸೈದಾಪುರ, ಆನವಟ್ಟಿ, ಎಲೆಕ್ಟ್ರಾನಿಕ್​ಸಿಟಿ, ವಿರಾಜಪೇಟೆ, ಬನವಾಸಿ, ಅಂಕೋಲಾ, ರೋಣ, ಗದಗ, ಹುನಗುಂದ, ಬಾಳೆಹೊನ್ನೂರು, ಗುಂಡ್ಲುಪೇಟೆ, ಜಯಪುರ, ಶಿಗ್ಗಾಂವ್, ಸಿದ್ದಾಪುರ, ಮುಂಡಗೋಡು, ಚಿಕ್ಕಮಗಳೂರು, ಶಿಗ್ಗಾಂವ್, ಎನ್​ಆರ್​ಪುರ, ಸೋಮವಾರಪೇಟೆ, ನಾಪೋಕ್ಲು, ಕಡೂರು, ಮದ್ದೂರಿನಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Monsoon 2025: ಕೇರಳಕ್ಕೆ ಮೇ 25ರೊಳಗೆ ಮುಂಗಾರು ಪ್ರವೇಶ; ಕರ್ನಾಟಕದಲ್ಲೂ ಬೇಗ ಮಳೆಗಾಲ ಶುರು

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ