Uttara Kannada Rain: ಅಂಕೋಲದಲ್ಲಿ ಪ್ರವಾಹ ಭೀತಿ; ಹಿಚ್ಕಡ ಗ್ರಾಮದಲ್ಲಿ ಕಣ್ಣೆದುರೇ ಕುಸಿದು ಬಿತ್ತು ಎರಡಂತಸ್ತಿನ ಮನೆ

Karnataka Rain: ಭಾರೀ ಮಳೆಗೆ ಮಲೆನಾಡು, ಕರಾವಳಿ ತತ್ತರಿಸಿದೆ. ಅಂಕೋಲ ತಾಲೂಕಿನ ಹಿಚ್ಕಡ ಗ್ರಾಮದಲ್ಲಿ ಎರಡು ಅಂತಸ್ತಿನ ಹಳೆಯ ಮನೆಯೊಂದು ಬುಡಸಮೇತ ಕುಸಿದು ಬಿದ್ದಿರುವ ಭಯಾನಕ ವಿಡಿಯೋ ವೈರಲ್ ಆಗಿದೆ.

Uttara Kannada Rain: ಅಂಕೋಲದಲ್ಲಿ ಪ್ರವಾಹ ಭೀತಿ; ಹಿಚ್ಕಡ ಗ್ರಾಮದಲ್ಲಿ ಕಣ್ಣೆದುರೇ ಕುಸಿದು ಬಿತ್ತು ಎರಡಂತಸ್ತಿನ ಮನೆ
ಅಂಕೋಲದಲ್ಲಿ ಕುಸಿದು ಬಿದ್ದ ಮನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 23, 2021 | 3:54 PM

ಅಂಕೋಲ: ನಾಲ್ಕೈದು ದಿನಗಳಿಂದ ಕರಾವಳಿ, ಕೊಡಗು, ಮಲೆನಾಡು ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ವರುಣನ ಆರ್ಭಟದಿಂದ ಜನರು ಮನೆಯಿಂದ ಹೊರಗೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡು (Malnad Rain) ಮತ್ತು ಕರಾವಳಿ ಭಾಗದ ಗಡಿಯಲ್ಲಿರುವ ಉತ್ತರ ಕನ್ನಡ (Uttara Kannada Rain) ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಇಲ್ಲಿನ ಅಂಕೋಲ ತಾಲೂಕಿನಲ್ಲಿ (Ankola Rain) ಪ್ರವಾಹದ ಭೀತಿ ಎದುರಾಗಿದ್ದು, ಭಾರೀ ಮಳೆಗೆ ಅಂಕೋಲದ ಹಿಚ್ಕಡ ಗ್ರಾಮದಲ್ಲಿ ನೋಡನೋಡುತ್ತಿದ್ದಂತೆ ದೊಡ್ಡ ಮನೆಯೊಂದು ಕುಸಿದು ಬಿದ್ದಿರುವ ಆಘಾತಕಾರಿ ವಿಡಿಯೋ (Shocking Video) ಈಗ ವೈರಲ್ ಆಗಿದೆ.

ಎರಡು ಅಂತಸ್ತಿನ ಹಳೆಯ ಮನೆಯೊಂದರ ಸುತ್ತಲೂ ನೀರು ನಿಂತಿದ್ದು, ಆ ಹೆಂಚಿನ ಮನೆ ಬುಡಸಮೇತ ಕುಸಿದು ಬಿದ್ದಿರುವ ಘಟನೆ ಅಂಕೋಲ ತಾಲೂಕಿನ ಹಿಚ್ಕಡ ಗ್ರಾಮದಲ್ಲಿ ನಡೆದಿದೆ. ಮನೆಯ ಗೋಡೆಗಳು ಮತ್ತು ಬುಡ ಮಳೆ ನೀರು ನಿಂತು ಶಿಥಿಲಗೊಂಡ ಪರಿಣಾಮ ಇಡೀ ಮನೆಯೇ ನೆಲಸಮವಾಗಿದೆ. ಅಪಾಯದ ಮುನ್ಸೂಚನೆಯಿಂದ ಆ ಮನೆಯಲ್ಲಿದ್ದವರೆಲ್ಲ ಹೊರಗೆ ಬಂದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ವಿಡಿಯೋ ಮಲೆನಾಡಿನ ಮಳೆಯ ಭೀಕರತೆಗೆ ಸಾಕ್ಷಿಯಾಗಿದೆ.

ಇನ್ನು, ಭಾರೀ ಮಳೆಯಾಗುತ್ತಿರುವುದರಿಂದ ಅಂಕೋಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತಿದ್ದು, ಅಂಕೋಲ-ಯಲ್ಲಾಪುರ-ಹುಬ್ಬಳ್ಳಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಗಂಗಾವಳಿ ನದಿಯ ನೀರು ಉಕ್ಕಿ ಹರಿದಿದ್ದರಿಂದ ಹತ್ತಾರು ಗ್ರಾಮಗಳು ಜಲಾವೃತವಾಗಿವೆ. ಅಂಕೋಲದ ಕೂರ್ವೆ ದ್ವೀಪ ಗಂಗಾವಳಿ ನದಿ ನೀರಿನ ಪ್ರವಾಹದಿಂದ ಸಂಪೂರ್ಣ ಮುಳುಗಡೆಯಾಗಿದೆ. ಈ ದ್ವೀಪದಲ್ಲಿ ಸಿಲುಕಿರುವವರನ್ನು ದೋಣಿಗಳ ಮೂಲಕ ರಕ್ಷಿಸಲಾಗಿದೆ. ಕುಮಟಾ ತಾಲೂಕಿನಲ್ಲಿಯೂ ಅಘನಾಶಿನಿ ನದಿ ಉಕ್ಕಿ ಹರಿಯುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿಯ ಚೆನ್ನಾಪುರ ಕೆರೆಯಲ್ಲಿ ಯುವಕ ನೀರುಪಾಲಾಗಿದ್ದಾನೆ. ಹುಸರಿ ಗ್ರಾಮದ ಗಂಗಾಧರ ತಿಮ್ಮಗೌಡ (28) ಮೃತಪಟ್ಟ ಯುವಕ. ಬೈಕ್‌ನಲ್ಲಿ ತೆರಳುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಎಲ್ಲ ನದಿಗಳೂ ಮಳೆಯಿಂದ ಉಕ್ಕಿ ಹರಿಯುತ್ತಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗಿರುವುದರಿಂದ ಶರಾವತಿ ನದಿಯ ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ನೀರು ಹರಿದುಬರುತ್ತಿದೆ. ಕರಾವಳಿ. ಮಲೆನಾಡು ಹಾಗೂ ಉತ್ತರ ಒಳನಾಡು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಜುಲೈ 26ರವರೆಗೂ ಭಾರೀ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಭಾರೀ ಮಳೆ: ಸೋರುತ್ತಿದೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆ, ಮುಳುಗುತ್ತಿವೆ ಜಮೀನು, ರಸ್ತೆ; ಎಲ್ಲೆಲ್ಲೂ ಅವ್ಯವಸ್ಥೆ

Karnataka Dams Water Level: ಕೊಡಗಿನಲ್ಲಿ 4 ದಿನ ಭಾರಿ ಮಳೆ, ಕರ್ನಾಟಕದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(Karnataka Rain Updates House Collapsed after Heavy Rain in Uttara Kannada District Ankola Taluk Shocking Video Viral)

Published On - 3:52 pm, Fri, 23 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ