
ಬೆಂಗಳೂರು, ಸೆಪ್ಟೆಂಬರ್ 12: ಮತ್ತೆ ಕರ್ನಾಟಕದಾದ್ಯಂತ ಮಳೆ(Rain) ಚುರುಕಾಗಿದೆ. ಗುರುವಾರದಿಂದ ಹಲವೆಡೆ ಮಳೆಯಾಗಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಇಂದಿನಿಂದ ಮಳೆ ಜೋರಾಗಲಿದ್ದು, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ,ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕಮಲಾಪುರ, ಎಂಎಂಹಿಲ್ಸ್, ಕಲಬುರಗಿ, ಚಿಂತಾಮಣಿ, ಟಿಜಿ ಹಳ್ಳಿ, ಕೋಲಾರ, ಗಂಗಾವತಿ, ಆಳಂದ, ಸೇಡಂ, ಹುಣಸಗಿ, ಅಫ್ಜಲ್ಪುರ, ವಿಜಯಪುರ, ತಾವರಗೇರಾ, ಸಿಂಧನೂರು, ರಾಯಚೂರು, ಮುನಿರಾಬಾದ್, ಮಾನ್ವಿ, ಲಿಂಗಸುಗೂರು, ಕುರ್ಡಿ, ಕೆಂಭಾವಿ, ಇಂಡಿ, ಹೊಸಕೋಟೆ, ಹೆಸರಘಟ್ಟ, ದೇವರಹಿಪ್ಪರಗಿ, ಶೋರಾಪುರ, ನಾಗಮಂಗಲ, ಮಾಗಡಿ, ಕೃಷ್ಣರಾಜಸಾಗರ, ಕರಟಗಿ, ಕನಕಪುರ, ಕಕ್ಕೇರಿ, ಕೆಆರ್ನಗರ, ಇಳಕಲ್, ಚಿಂಚೋಳಿ, ಚಿಕ್ಕಬಳ್ಳಾಪುರ, ಭಾಲ್ಕಿ, ಬಸವನಬಾಗೇವಾಡಿ, ಕನಕಪುರ, ಗಂಗಾಪುರ, ಗಬ್ಬೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ 2 ದಿನಗಳ ಬಳಿಕ ಮತ್ತೆ ಶುರುವಾಗುತ್ತೆ ಮಳೆ
ಹೊನ್ನಾವರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 33.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.