AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಹೊನ್ನಾವರ, ಮಂಕಿ, ಕೊಲ್ಲೂರು, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಕಾರವಾರ, ಭಾಗಮಂಡಲ, ಗೇರುಸೊಪ್ಪ, ಮೂಲ್ಕಿ, ಮಂಗಳೂರು, ಸುಳ್ಯ, ಕದ್ರಾ, ಪಣಂಬೂರು, ಬಂಡೀಪುರ, ಕಮ್ಮರಡಿ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮಳೆಯ ಅಬ್ಬರ
ಮಳೆImage Credit source: in
ನಯನಾ ರಾಜೀವ್
|

Updated on: Aug 12, 2024 | 7:33 AM

Share

ಕರ್ನಾಟಕದ ಕರಾವಳಿಯಲ್ಲಿ ಕೊಂಚ ಮಳೆ ಕೊಂಚ ಬಿಡುವು ಕೊಟ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಹೊನ್ನಾವರ, ಮಂಕಿ, ಕೊಲ್ಲೂರು, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಕಾರವಾರ, ಭಾಗಮಂಡಲ, ಗೇರುಸೊಪ್ಪ, ಮೂಲ್ಕಿ, ಮಂಗಳೂರು, ಸುಳ್ಯ, ಕದ್ರಾ, ಪಣಂಬೂರು, ಬಂಡೀಪುರ, ಕಮ್ಮರಡಿ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ. ಇಂದು ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್​ 13ರವರೆಗೆ ಭಾರಿ ಮಳೆ

ಬೆಂಗಳೂರಿನಲ್ಲಿ ಬೆಳಗಿನಜಾವದಿಂದಲೇ ಮಳೆ ಶುರುವಾಗಿತ್ತು, ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳಗಾವಿಯಲ್ಲಿ 26.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್​, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್