ಕರ್ನಾಟಕದ ಕರಾವಳಿಯಲ್ಲಿ ಕೊಂಚ ಮಳೆ ಕೊಂಚ ಬಿಡುವು ಕೊಟ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಹೊನ್ನಾವರ, ಮಂಕಿ, ಕೊಲ್ಲೂರು, ಕುಮಟಾ, ಗೋಕರ್ಣ, ಶಿರಾಲಿ, ಅಂಕೋಲಾ, ಕಾರವಾರ, ಭಾಗಮಂಡಲ, ಗೇರುಸೊಪ್ಪ, ಮೂಲ್ಕಿ, ಮಂಗಳೂರು, ಸುಳ್ಯ, ಕದ್ರಾ, ಪಣಂಬೂರು, ಬಂಡೀಪುರ, ಕಮ್ಮರಡಿ, ಸೋಮವಾರಪೇಟೆಯಲ್ಲಿ ಮಳೆಯಾಗಿದೆ.
ಇಂದು ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 13ರವರೆಗೆ ಭಾರಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಜಾವದಿಂದಲೇ ಮಳೆ ಶುರುವಾಗಿತ್ತು, ಎಚ್ಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೆಳಗಾವಿಯಲ್ಲಿ 26.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ