AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 9ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ
ಮಳೆ Image Credit source: Varthabharati
ನಯನಾ ರಾಜೀವ್
|

Updated on:Jul 03, 2025 | 7:23 AM

Share

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಆಗುಂಬೆ, ಕದ್ರಾ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಶೃಂಗೇರಿ, ಕಮ್ಮರಡಿ, ಕೊಪ್ಪ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಶಿರಾಲಿ, ಯಲ್ಲಾಪುರ, ಬಂಟವಾಳ, ಮಂಕಿ, ಚಿಂಚೋಳಿ, ಹುಮ್ನಾಬಾದ್, ಸೋಮವಾರಪೇಟೆ, ಜಯಪುರ, ಭಾಗಮಂಡಲ,ತ್ಯಾಗರ್ತಿ, ನಾಪೋಕ್ಲು, ಕಳಸ, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಳಗಾವಿಯಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:21 am, Thu, 3 July 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?