Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ

ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಚುರುಕಾಗಲಿದ್ದು, 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಜುಲೈ 9ರವರೆಗೂ ಭಾರಿ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಒಂದು ವಾರ ಭಾರಿ ಮಳೆ
ಮಳೆ
Image Credit source: Varthabharati

Updated on: Jul 03, 2025 | 7:23 AM

ಬೆಂಗಳೂರು, ಜುಲೈ 03: ಕರ್ನಾಟಕದ ಕರಾವಳಿ ಸೇರಿ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ(Rain)ಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಆಗುಂಬೆ, ಕದ್ರಾ, ಜೋಯ್ಡಾ, ಗೇರುಸೊಪ್ಪ, ಸಿದ್ದಾಪುರ, ಮೂಡುಬಿದಿರೆ, ಕಾರ್ಕಳ, ಲೋಂಡಾ, ಶೃಂಗೇರಿ, ಕಮ್ಮರಡಿ, ಕೊಪ್ಪ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಅಂಕೋಲಾ, ಶಿರಾಲಿ, ಯಲ್ಲಾಪುರ, ಬಂಟವಾಳ, ಮಂಕಿ, ಚಿಂಚೋಳಿ, ಹುಮ್ನಾಬಾದ್, ಸೋಮವಾರಪೇಟೆ, ಜಯಪುರ, ಭಾಗಮಂಡಲ,ತ್ಯಾಗರ್ತಿ, ನಾಪೋಕ್ಲು, ಕಳಸ, ಸೇಡಂ, ಮಂಠಾಳ, ಚಿತ್ತಾಪುರ, ಖಾನಾಪುರ, ಕುಮಟಾ, ಉಡುಪಿ, ಕೋಟಾ, ಗೋಕರ್ಣ, ಮುಲ್ಕಿ, ಹಳಿಯಾಳ, ಕಾರವಾರ, ಬೀದರ್, ಕೂಡಲಸಂಗಮ, ವಿರಾಜಪೇಟೆ, ಬಾಳೆಹೊನ್ನೂರು, ಕೊಟ್ಟಿಗೆಹಾರ, ಕೊಟ್ಟೂರು, ಹುಂಚದಕಟ್ಟೆ, ಕಂಪ್ಲಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಜುಲೈ 7ರವರೆಗೂ ಮಳೆ ಜೋರು, ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:21 am, Thu, 3 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us