Karnataka Rains: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್; ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
Prajwal D'Souza
| Updated By: Ganapathi Sharma

Updated on:Jul 14, 2023 | 7:19 PM

ಬೆಂಗಳೂರು, ಜುಲೈ 14 : ಕರಾವಳಿ ಕರ್ನಾಟಕದಲ್ಲಿ (Coastal Karnataka) ಶನಿವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಆ ಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಗಿನ ಜಾವದವರೆಗೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು (115.6 ಮಿ.ಮೀ ನಿಂದ 204.4 ಮಿ.ಮೀ.) ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಮಹಾರಾಷ್ಟ್ರದಿಂದ ಉತ್ತರ ಕೇರಳ ಕರಾವಳಿಯವರೆಗೆ ಸಮುದ್ರದಲ್ಲಿ ಸುಳಿ ಉಂಟಾಗಿರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರಿನ ವಿಜ್ಞಾನಿ ಎ ಪ್ರಸಾದ್ ಹೇಳಿದ್ದಾರೆ. ಶನಿವಾರದಿಂದ ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುರುವಾರ ಕರಾವಳಿ ಕರ್ನಾಟಕದ ಮೂರು ಕಡೆ ಅತಿ ಹೆಚ್ಚು ಮಳೆಯಾಗಿದ್ದು, ಎಂಟು ಕಡೆ ಭಾರಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದರೆ 15 ಸೆಂ.ಮೀ ಮಳೆಯಾಗಿದೆ. ಅಂಕೋಲಾ ಮತ್ತು ಕಾರವಾರದಲ್ಲಿ ಕ್ರಮವಾಗಿ 13 ಸೆಂ.ಮೀ ಮತ್ತು 12 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ತಿಳಿಸಿದ್ದಾರೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡು ಅಥವಾ ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ ನೀಡಿಲ್ಲ.

ಇದನ್ನೂ ಓದಿ: Dengue: ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ; ತುರ್ತು ಸಂದರ್ಭದಲ್ಲಿ ರಕ್ತ, ಪ್ಲೇಟ್​​ಗಳು ಎಲ್ಲೆಲ್ಲ ಸಿಗುತ್ತವೆ? ಇಲ್ಲಿದೆ ವಿವರ

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 14 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ