Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಮಹಾಮಳೆ, ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಬೀದರ್, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

Karnataka Rains: ಕರ್ನಾಟಕದ 8 ಜಿಲ್ಲೆಗಳಲ್ಲಿ ಮಹಾಮಳೆ, ಆರೆಂಜ್ ಅಲರ್ಟ್​ ಘೋಷಣೆ
ಮಳೆ

Updated on: Aug 25, 2024 | 8:14 AM

ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಚಳಿ ಗಾಳಿ ಜತೆಗೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮಳೆ ಹೆಚ್ಚಾಗಲಿದೆ.

ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಧಾರವಾಡ, ಬೀದರ್, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಕದ್ರಾ, ಗೋಕರ್ಣ, ಅಂಕೋಲಾ, ಜೋಯಿಡಾ, ಯಲ್ಲಾಪುರ, ಕುಮಟಾ, ಹಳಿಯಾಳ, ನಿಪ್ಪಾಣಿ, ಕಾರ್ಕಳ, ಉಡುಪಿ, ಭಾಲ್ಕಿ, ಬೆಳಗಾವಿ, ಚಿಕ್ಕೋಡಿ, ಕೊಟ್ಟಿಗೆಹಾರ, ಆಗುಂಬೆ, ಶಿರಾಲಿ, ಸಿದ್ದಾಪುರ, ಉಪ್ಪಿನಂಗಡಿ, ಹುಬ್ಬಳ್ಳಿ, ಕಲಘಟಗಿ, ಧಾರವಾಡ, ಅಥಣಿ, ಧಾರವಾಡ, ಬೈಲಹೊಂಗಲ, ವಿರಾಜಪೇಟೆ, ಭಾಗಮಂಡಲ, ಕಮ್ಮರಡಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಮತ್ತೆ ಹೆಚ್ಚಲಿದೆ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us