Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಮತ್ತೆ ಹೆಚ್ಚಲಿದೆ ಮಳೆ

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಮತ್ತೆ ಹೆಚ್ಚಲಿದೆ ಮಳೆ
ಮಳೆ
Follow us
|

Updated on: Aug 23, 2024 | 7:46 AM

ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದ್ದು, ಆಗಸ್ಟ್ 26ರ ಬಳಿಕ ಮಳೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.

ಕೊಟ್ಟಿಗೆಹಾರ, ಗುತ್ತಲ್, ತಿಕ್ಕೋಟ, ದೇವರಹಿಪ್ಪರಗಿ, ಭಾಗಮಂಡಲ, ಸಿದ್ದಾಪುರ, ಕೊಲ್ಲೂರು, ಇಳಕಲ್, ರಾಯಚೂರು, ಕುಷ್ಟಗಿ, ಹಾವೇರಿ, ಸೇಡಂ, ಕೂಡಲಸಂಗಮ, ತ್ಯಾಗರ್ತಿ, ದಾವಣಗೆರೆ, ಕುಂದಾಪುರ, ನಾಪೋಕ್ಲು, ಚಿಟಗುಪ್ಪ, ಸೈದಾಪುರ, ಸವಣೂರು, ಮುನಿರಾಬಾದ್, ಯಲಬುರ್ಗಾ, ನಾರಾಯಣಪುರಲದಲ್ಲಿ ಮಳೆಯಾಗಿದೆ.

ಹಗರಿಬೊಮ್ಮನಹಳ್ಳಿ, ದಾವಣಗೆರೆ, ಗುಬ್ಬಿ, ರಾಮನಗರ, ಮೂಡಿಗೆರೆ, ಸುಳ್ಯ, ಪಣಂಬೂರು, ಕದ್ರಾ, ಕಾರವಾರ, ಕ್ಯಾಸಲ್​ರಾಕ್, ಮುದ್ದೇಬಿಹಾಳ, ರೋಣ, ಗದಗ, ಶಿಗ್ಗಾಂವ್, ಬೆಳ್ಳಟ್ಟಿ, ಗಂಗಾವತಿ, ಗೋಕಾಕ್, ಲಕ್ಷ್ಮೇಶ್ವರ, ನಿಪ್ಪಾಣಿ, ಆನವಟ್ಟಿ, ಬಾಳೆಹೊನ್ನೂರು, ಸೋಮವಾರಪೇಟೆ, ಕುಡತಿನಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್​ 28ರವರೆಗೂ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ