Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್, ಆರೆಂಜ್​ ಅಲರ್ಟ್​?

ಕರ್ನಾಟಕದಾದ್ಯಂತ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್​ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್, ಆರೆಂಜ್​ ಅಲರ್ಟ್​?
ಮಳೆ
Image Credit source: PTI

Updated on: Jun 27, 2025 | 7:18 AM

ಬೆಂಗಳೂರು, ಜೂನ್ 27: ಕರ್ನಾಟಕದಾದ್ಯಂತ ಭಾರಿ ಮಳೆ(Rain)ಯಾಗುತ್ತಿದೆ. ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್​ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರಿ ಮಳೆಯಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಲೋಂಡಾ, ಜಯಪುರ, ಕಾರ್ಕಳ, ಬಂಟವಾಳ, ಸುಳ್ಯ, ಗೇರುಸೊಪ್ಪ, ಹೊನ್ನಾವರ, ಮಾಣಿ, ಶಕ್ತಿನಗರ, ಕುಂದಾಪುರ, ಮೂಡುಬಿದಿರೆ, ಅಂಕೋಲಾ, ಬೆಳಗಾವಿ, ಆನವಟ್ಟಿ, ಸರಗೂರು, ಅಫ್ಝಲ್​ಪುರ, ಮಂಕಿ, ಹಳಿಯಾಳ, ಮುಂಡಗೋಡು, ಪುತ್ತೂರು, ಉಡುಪಿ, ಗೋಕರ್ಣ, ಶಿರಾಲಿ, ಮಂಗಳೂರು, ಕೋಟಾ, ಬೀದರ್, ಕಿತ್ತೂರು, ಹಾವೇರಿ, ಚಿಂಚೋಳಿ, ಧಾರವಾಡ, ಹುಬ್ಬಳ್ಳಿ, ಹಿರೆಕೆರೂರು, ಕಲಬುರಗಿ, ಗುಬ್ಬಿ, ಜಗಳೂರು, ಭದ್ರಾವತಿ, ಕೋಣನೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್​ಎಎಲ್​ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 23.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us