AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕರ್ನಾಟಕದಾದ್ಯಂತ ಅಕ್ಟೋಬರ್ 29ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಾದ್ಯಂತ ಅ.29ರವರೆಗೂ ವಿಪರೀತ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Oct 23, 2025 | 7:18 AM

Share

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ, ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ(Rain) ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮತ್ತಷ್ಟು ಓದಿ: Weather Today: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕುಮಟಾ, ಮಂಕಿ, ಬಂಟವಾಳ, ಬೆಳ್ತಂಗಡಿ, ಗಂಗಾವತಿ, ಕದ್ರಾ, ಕಾರ್ಕಳ, ಮಂಗಳೂರು, ಮೂಡುಬಿದಿರೆ, ಸೈದಾಪುರ, ತಾವರಗೇರಾ, ಯಗಟಿ, ಬೆಳ್ಳೂರು, ದಾವಣಗೆರೆ, ಧರ್ಮಸ್ಥಳ, ಕೋಟಾ, ಕುಷ್ಟಗಿ, ಪೊನ್ನಂಪೇಟೆ, ಕೋಲಾರ, ಗುಬ್ಬಿ, ಶಕ್ತಿನಗರ, ಸಿದ್ದಾಪುರ, ಭರಮಸಾಗರ, ಚನ್ನಗಿರಿಯಲ್ಲಿ ಮಳೆಯಾಗಿದೆ.

ಚಿಕ್ಕಬಳ್ಳಾಪುರ, ಹಿರಿಯೂರು, ಹೊನ್ನಾವರ, ಹೊಸದುರ್ಗಾ, ಎಚ್​ಡಿಕೋಟೆ, ಹಗರಿಬೊಮ್ಮನಹಳ್ಳಿ, ಇಂಡಿ,ಹೊಸದುರ್ಗ, ಕಿಬ್ಬನಹಳ್ಳಿ, ಕುಣಿಗಲ್, ಮಾಗಡಿ, ನಾಗಮಂಗಲ, ಶಿವಮೊಗ್ಗ, ಟಿಜಿ ಹಳ್ಳಿ, ತಿಪಟೂರು, ಯಡ್ರಾಮಿಯಲ್ಲಿ ಮಳೆಯಾಗಿದೆ.

ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ.

ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಅಂಬೇಡ್ಕರ್ ಪ್ರತಿಮೆ ಎದುರು ಅಂತರ್ಜಾತಿ ವಿವಾಹವಾದ ಯುವ ಜೋಡಿ!
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ
ಹಾಸನ: ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, ತಪ್ಪಿದ ಭಾರೀ ಅನಾಹುತ