Karnataka Rains: ಕರ್ನಾಟಕದಾದ್ಯಂತ ಮುಂದುವರೆದ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಕರ್ನಾಟಕದಲ್ಲಿ ಮಳೆ ಮುಂದುವರೆದಿದ್ದರೂ ಆರ್ಭಟ ಕೊಂಚ ಕಡಿಮೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ಮುಂದುವರೆದ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಮಳೆImage Credit source: Business Today
Follow us
|

Updated on: Aug 04, 2024 | 8:02 AM

ಕರ್ನಾಟಕದಾದ್ಯಂತ ಮಳೆ ಮುಂದುವರೆದಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಸಿದ್ದಾಪುರ, ಲೋಂಡಾ, ಕಾರ್ಕಳ, ಕಾರವಾರ, ಗೇರುಸೊಪ್ಪ, ಹೊನ್ನಾವರ, ಕೊಲ್ಲೂರು, ಶೃಂಗೇರಿ, ಗೋಕರ್ಣ, ಮುಲ್ಕಿ, ಕದ್ರಾ, ಲಿಂಗನಮಕ್ಕಿ, ಕಮ್ಮರಡಿ, ಭಾಗಮಂಡಲ, ಜಯಪುರದಲ್ಲಿ ಭಾರಿ ಮಳೆಯಾಗಿದೆ. ಕುಮಟಾ, ಉಡುಪಿ, ಅಂಕೋಲಾ, ಬೆಳ್ತಂಗಡಿ, ಧರ್ಮಸ್ಥಳ, ಮಾಣಿ, ಯಲ್ಲಾಪುರ, ಕೊಪ್ಪ, ಮೂಡಿಗೆರೆ, ಹಾರಂಗಿ, ಪುತ್ತೂರು, ಸುಳ್ಯ, ಬನವಾಸಿ, ಬೆಳಗಾವಿ, ನಾಪೋಕ್ಲು, ಹುಂಚದಕಟ್ಟೆ, ಮೂರ್ನಾಡು, ಬಾಳೆಹೊನ್ನೂರು, ಹಳಿಯಾಳ, ಹೊಸಕೋಟೆ, ಕೊಟ್ಟಿಗೆಹಾರ, ಎನ್​ಆರ್​ಪುರ, ಆನವಟ್ಟಿ, ಭಾಲ್ಕಿ, ನಿಪ್ಪಾಣಿ, ಸೇಡಂ, ದೇವನಹಳ್ಳಿ, ಪೊನ್ನಂಪೇಟೆ, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿಗೆ ಮತ್ತೆ ಮಳೆಯ ರೆಡ್ ಅಲರ್ಟ್​, ಮೂರು ದಿನ ಮಹಾಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಣಂಬೂರಿನಲ್ಲಿ 27.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 29.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 29.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ