Karnataka Rains: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ. ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ವಿಜಯನಗರದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಗಳಲ್ಲಿ ಜೂನ್ 11ರಿಂದ ಮತ್ತಷ್ಟು ಮಳೆ ಹೆಚ್ಚಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಜೂನ್ 10: ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹಲವೆಡೆ ಯೆಲ್ಲೋ,ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೊಡಗು, ವಿಜಯನಗರದಲ್ಲಿ ಅತಿ ಹೆಚ್ಚು ಮಳೆ(Rain)ಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಗಳಲ್ಲಿ ಜೂನ್ 11ರಿಂದ ಮತ್ತಷ್ಟು ಮಳೆ ಹೆಚ್ಚಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆಯಾಗಿದೆ? ಪರಶುರಾಂಪುರ, ಕುಂದಾಪುರ, ಕಕ್ಕೇರಿ, ಸಿಂಧನೂರು, ಧಾರವಾಡ, ಕೋಟಾ, ಮಸ್ಕಿ, ಇಂಡಿ, ಔರಾದ್, ವಿಜಯಪುರ, ಮಂಠಾಳ, ನಿಪ್ಪಾಣಿ, ಹುಮ್ನಾಬಾದ್, ಕೂಡಲಸಂಗಮ, ಆಗುಂಬೆ, ಭಾಗಮಂಡಲ, ರಾಯಲ್ಪಾಡು, ಹರಪನಹಳ್ಳಿ, ಮದ್ದೂರು, ಝಲ್ಕಿ, ಯಡ್ರಾಮಿ, ಕೆಂಭಾವಿ, ಲಕ್ಷ್ಮೇಶ್ವರ, ಮುನಿರಾಬಾದ್, ನಲ್ವತವಾಡ, ಮುಲ್ಕಿ, ಕ್ಯಾಸಲ್ರಾಕ್, ಕುಮಟಾ, ಬೀದರ್, ಕನಕಪುರ, ಬರಗೂರು, ಕೋಲಾರ, ಗಂಗಾವತಿ, ಲಿಂಗಸುಗೂರು, ಇಳಕಲ್, ಗುತ್ತಲ್, ಬಿಳಗಿ, ಮಾನ್ವಿ, ಕುರ್ಡಿ, ಗುತ್ತಲ್, ಸುಳ್ಯ, ಅಂಕೋಲಾ, ಗೋಕರ್ಣ, ಮೂಡುಬಿದಿರೆ, ಗೇರುಸೊಪ್ಪ, ಕಾರ್ಕಳದಲ್ಲಿ ಮಳೆಯಾಗಿದೆ.
ಎಚ್ಎಎಲ್ನಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rain: ಕರ್ನಾಟಕದಲ್ಲಿ ಜೂನ್ 11ರಿಂದ ಮತ್ತೆ ಮಳೆ ಆರ್ಭಟ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್
ಬೆಳಗಾವಿನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ