AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಬೆಂಗಳೂರಲ್ಲೂ ಮೇ26ರವರೆಗೆ ಭಾರಿ ಮಳೆ

ಕರ್ನಾಟಕದಾದ್ಯಂತ ಮುಂದಿನ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್​, ಬೆಂಗಳೂರಲ್ಲೂ ಮೇ26ರವರೆಗೆ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: May 20, 2025 | 7:44 AM

Share

ಬೆಂಗಳೂರು, ಮೇ 20: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆ(Rain)ಯಾಗುತ್ತಿದೆ.ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಹಾಸನ, ಕೊಡಗಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಗದಗ,ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಮೇ 26ರವರೆಗೆ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.

ಎಲ್ಲೆಲ್ಲಿ ಮಳೆಯಾಗಿದೆ? ಬೆಂಗಳೂರು ಜಿಕೆವಿಕೆ, ಚಾಮರಾಜನಗರ, ಬೆಂಗಳೂರು ನಗರ, ಟಿಜಿಹಳ್ಳಿ, ಕನಕಪುರ, ಹುನಗುಂದ, ನಾರಾಯಣಪುರದಲ್ಲಿ ಹೆಚ್ಚು ಮಳೆಯಾಗಿದೆ. ಹೊಸಕೋಟೆ, ಹೆಸರಘಟ್ಟ, ಕುಣಿಗಲ್, ಬಸವನ ಬಾಗೇವಾಡಿ, ಚಿತ್ತಾಪುರ, ಜೇವರ್ಗಿ, ನಲ್ವತವಾಡ, ಮಾಗಡಿ, ಎಲೆಕ್​ಟ್ರಾನಿಕ್​ ಸಿಟಿ, ಹಣಸಗಿ, ಬೆಳಗಾವಿ, ಕೆಂಭಾವಿ, ಕಕ್ಕೇರಿ, ಅಫ್ಜಲ್​ಪುರ, ಚಿಂಚೋಳಿ, ಗದಗದಲ್ಲಿ ಮಳೆಯಾಗಿದೆ.

ಬೆಳ್ಳೂರು, ಎಂಎಂ ಹಿಲ್ಸ್​,ಕೋಲಾರ, ಭಾಗಮಂಡಲ, ಬರಗೂರು, ಮದ್ದೂರು,ಮಧುಗಿರಿ, ಗೌರಿಬಿದನೂರು, ಬಾದಾಮಿ, ಸಿರಾ, ಕುಶಾಲನಗರ, ಕೋಲಾರ, ಸೈದಾಪುರ, ಲೋಕಾಪುರ, ಇಳಕಲ್, ಮುದ್ದೇಬಿಹಾರ, ಗಂಗಾವತಿ, ನಾಗಮಂಗಲ, ಕೃಷ್ಣರಾಜಸಾಗರ, ರಾಯಲ್ಪಾಡು, ಯಲಬುರ್ಗಾ, ರಬಕವಿ, ಮಿಡಿಗೇಶಿ, ಮುನೀರಾಬಾದ್, ಸಿಂಧಗಿ, ಚಿಕ್ಕೋಡಿ, ಖಾನಾಪುರ, ಬೀದರ್, ತಾವರೆಗೇರಾ, ಬೀದರ್, ಕಲಘಟಗಿಯಲ್ಲಿ ಮಳೆಯಾಗಿದೆ.

ಧಾರವಾಡ, ತೊಂಡೆಭಾವಿ, ನರಗುಂದ, ಬನವಾಸಿ, ಅಂಕೋಲಾ, ಪೊನ್ನಂಪೇಟೆ, ಅರಕಲಗೂಡು, ಪರಶುರಾಂಪುರ, ಬೇಗೂರು, ಹಿರಿಯೂರು, ಬೇಲೂರಿನಲ್ಲಿ ಮಳೆಯಾಗಿದೆ. ಬೀದರ್​ನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಹುಚ್ಚು ಮಳೆ, ಆರೆಂಜ್ ಅಲರ್ಟ್

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ