AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು

ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದೆ, ಶನಿವಾರ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು
ಮಳೆ Image Credit source: PTI
ನಯನಾ ರಾಜೀವ್
|

Updated on: Jun 15, 2025 | 7:24 AM

Share

ಬೆಂಗಳೂರು, ಜೂನ್ 15: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆ(Rain)ಯಾಗುತ್ತಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಎಲ್ಲೆಲ್ಲಿ ಮಳೆಯಾಗಿದೆ? ಆಗುಂಬೆ, ಮಂಗಳೂರು, ಉಡುಪಿ, ಉಪ್ಪಿನಂಗಡಿ, ಗೇರುಸೊಪ್ಪ, ಭಟ್ಕಳ, ಪಣಂಬೂರು, ಬೆಳ್ತಂಗಡಿ, ಬಸವನ ಬಾಗೇವಾಡಿಯಲ್ಲಿ ಹೆಚ್ಚು ಮಳೆಯಾಗಿದೆ. ಸಿದ್ದಾಪುರ, ಮಾಣಿ, ಕುಂದಾಪುರ, ಗೋಕರ್ಣ, ಪುತ್ತೂರು, ಕೋಟಾ, ಮೂಡುಬಿದಿರೆ, ಕಾರ್ಕಳ, ಹೊನ್ನಾವರ, ಧರ್ಮಸ್ಥಳ, ಅಂಕೋಲಾ, ಮಂಗಳೂರು, ಕೊಟ್ಟಿಗೆಹಾರ, ಮುಲ್ಕಿ, ಕುಮಟಾ, ಶಿರಾಲಿ, ವಿಜಯಪುರ, ನಿಪ್ಪಾಣಿ, ಶೃಂಗೇರಿ, ಕೊಪ್ಪ, ಭಾಗಮಂಡಲ, ಮಂಕಿಯಲ್ಲಿ ಮಳೆಯಾಗಿದೆ. ಕಾರವಾರ, ಗಬ್ಬೂರು, ಹುಂಚದಕಟ್ಟೆ, ಕಳಸ, ನಾಪೋಕ್ಲು, ಬಾಳೆಹೊನ್ನೂರು, ಬನವಾಸಿ, ಯಲ್ಲಾಪುರ, ಜೋಯಿಡಾ, ಹುಕ್ಕೇರಿ, ಖಾನಾಪುರ, ಬಾದಾಮಿ, ಸೇಡಬಾಳ, ಸೋಮವಾರಪೇಟೆ, ಕೃಷ್ಣರಾಜಸಾಗರ, ಬಂಡೀಪುರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!