Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು

ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದೆ, ಶನಿವಾರ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್, ಉತ್ತರ ಒಳನಾಡಿನಲ್ಲೂ ಮಳೆ ಜೋರು
ಮಳೆ
Image Credit source: PTI

Updated on: Jun 15, 2025 | 7:24 AM

ಬೆಂಗಳೂರು, ಜೂನ್ 15: ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. ಎಲ್ಲೆಡೆ ಮಳೆ(Rain)ಯಾಗುತ್ತಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರಿನಲ್ಲಿ ಶುಕ್ರವಾರದಿಂದ ಮಳೆ ಹೆಚ್ಚಾಗಿದೆ. ಭಾನುವಾರ ಕೂಡ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಎಲ್ಲೆಲ್ಲಿ ಮಳೆಯಾಗಿದೆ?
ಆಗುಂಬೆ, ಮಂಗಳೂರು, ಉಡುಪಿ, ಉಪ್ಪಿನಂಗಡಿ, ಗೇರುಸೊಪ್ಪ, ಭಟ್ಕಳ, ಪಣಂಬೂರು, ಬೆಳ್ತಂಗಡಿ, ಬಸವನ ಬಾಗೇವಾಡಿಯಲ್ಲಿ ಹೆಚ್ಚು ಮಳೆಯಾಗಿದೆ. ಸಿದ್ದಾಪುರ, ಮಾಣಿ, ಕುಂದಾಪುರ, ಗೋಕರ್ಣ, ಪುತ್ತೂರು, ಕೋಟಾ, ಮೂಡುಬಿದಿರೆ, ಕಾರ್ಕಳ, ಹೊನ್ನಾವರ, ಧರ್ಮಸ್ಥಳ, ಅಂಕೋಲಾ, ಮಂಗಳೂರು, ಕೊಟ್ಟಿಗೆಹಾರ, ಮುಲ್ಕಿ, ಕುಮಟಾ, ಶಿರಾಲಿ, ವಿಜಯಪುರ, ನಿಪ್ಪಾಣಿ, ಶೃಂಗೇರಿ, ಕೊಪ್ಪ, ಭಾಗಮಂಡಲ, ಮಂಕಿಯಲ್ಲಿ ಮಳೆಯಾಗಿದೆ.
ಕಾರವಾರ, ಗಬ್ಬೂರು, ಹುಂಚದಕಟ್ಟೆ, ಕಳಸ, ನಾಪೋಕ್ಲು, ಬಾಳೆಹೊನ್ನೂರು, ಬನವಾಸಿ, ಯಲ್ಲಾಪುರ, ಜೋಯಿಡಾ, ಹುಕ್ಕೇರಿ, ಖಾನಾಪುರ, ಬಾದಾಮಿ, ಸೇಡಬಾಳ, ಸೋಮವಾರಪೇಟೆ, ಕೃಷ್ಣರಾಜಸಾಗರ, ಬಂಡೀಪುರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us