Karnataka Rains: ಕರ್ನಾಟಕದಲ್ಲಿ ಜೂನ್ 13ರಿಂದ ಮಳೆ ಜೋರು, ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಕರ್ನಾಟಕದಾದ್ಯಂತ ಜೂನ್ 13ರಿಂದ ಮುಂಗಾರು ಚುರುಕುಗೊಳ್ಳಲಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿತ್ತು.

Karnataka Rains: ಕರ್ನಾಟಕದಲ್ಲಿ ಜೂನ್ 13ರಿಂದ ಮಳೆ ಜೋರು, ಈ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​
ಮಳೆ
Image Credit source: PTI

Updated on: Jun 12, 2025 | 7:29 AM

ಬೆಂಗಳೂರು, ಜೂನ್ 12: ಈಗಾಗಲೇ ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ, ಜೂನ್ 13ರಿಂದ ಮಳೆ(Rain)ಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಒಟ್ಟಿನಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಬೆಂಗಳೂರು ಸೇರಿ ಹಲವೆಡೆ ಬುಧವಾರ ಮಳೆಯಾಗಿತ್ತು.

ಮಂಗಳೂರು, ಕೋಟಾ, ಮುಲ್ಕಿ, ಕುಂದಾಪುರ, ಚಿಟಗುಪ್ಪ, ಭಾಲ್ಕಿ, ದಾವಣಗೆರೆ, ಬೇಗೂರು, ಹರಪನಹಳ್ಳಿ, ಬಾಳೆಹೊನ್ನೂರು, ದಾವಣಗೆರೆ, ಗೌರಿಬಿದನೂರು, ಕಕ್ಕೇರಿ, ಮೂಡುಬಿದಿರೆ, ಮಾಣಿ, ಹುಮ್ನಾಬಾದ್, ಲಕ್ಷ್ಮೇಶ್ವರ, ಲಿಂಗಸುಗೂರು, ಯಡ್ರಾಮಿ, ಕಮಲಾಪುರ, ಶಾಹಪುರ,ಬೀದರ್, ಚನ್ನಗಿರಿ, ಚಾಮರಾಜನಗರ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, 9 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಎಚ್​ಎಎಲ್​ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us