Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು

ಕರ್ನಾಟಕದಾದ್ಯಂತ ಮುಂಗಾರು ಅಬ್ಬರ ಹೆಚ್ಚಾಗಲಿದ್ದು, ಕೊಡಗಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.

Karnataka Rains: ಕೊಡಗಿಗೆ ರೆಡ್ ಅಲರ್ಟ್​, ಕರ್ನಾಟಕದ ಕರಾವಳಿ, ಮಲೆನಾಡಿನಲ್ಲೂ ಮಳೆ ಅಬ್ಬರ ಜೋರು
ಮಳೆ
Image Credit source: PTI

Updated on: Jun 26, 2025 | 7:21 AM

ಬೆಂಗಳೂರು, ಜೂನ್ 26: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಹೆಚ್ಚಾಗಿದ್ದು, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.

ಕ್ಯಾಸಲ್​ರಾಕ್, ಯಲ್ಲಾಪುರ, ಖಾನಾಪುರ, ಲೋಂಡಾ, ಕಿತ್ತೂರು, ಹುಂಚದಕಟ್ಟೆ, ಕಮ್ಮರಡಿ, ಆಗುಂಬೆ, ಶೃಂಗೇರಿ, ಕಳಸ, ಸೋಮವಾರಪೇಟೆ, ಕೊಪ್ಪ, ನಾಪೋಕ್ಲುವಿನಲ್ಲಿ ಭಾರಿ ಮಳೆಯಾಗಿದೆ. ಬೆಳ್ತಂಗಡಿ,ಮೂಡುಬಿದಿರೆ, ಧರ್ಮಸ್ಥಳ, ಕೊಟ್ಟಿಗೆಹಾರ, ಕದ್ರಾ, ಸುಳ್ಯ, ಬಂಟವಾಳ, ಮಂಗಳೂರು, ಹಳಿಯಾಳ, ಜಯಪುರ, ಪೊನ್ನಂಪೇಟೆ, ಪಣಂಬೂರು, ಜೋಯ್ಡಾ, ಎನ್​ಆರ್​ಪುರ್, ಪುತ್ತೂರು, ನಿಪ್ಪಾಣಿ, ಹಿಡಕಲ್, ಕುಂದಾಪುರ್, ಶಿಗ್ಗಾಂವ್, ಸಂಕೇಶ್ವರ್, ಸೇಡಂ, ಸೈದಾಪುರ, ಕಮಲಾಪುರ, ದೇವರಹಿಪ್ಪರಗಿ, ಬೈಲಹೊಂಗಲ, ಮುದ್ದೇಬಿಹಾಳ, ಹುಬ್ಬಳ್ಳಿ, ಮಹಾಲಿಂಗಪುರ, ಭದ್ರಾವತಿ, ಎಚ್​ಡಿ ಕೋಟೆ, ಸರಗೂರು, ಕೋಣನೂರು, ಕುಶಾಲ್​ನಗರ, ತ್ಯಾಗರ್ತಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ಕರಾವಳಿ ಸೇರಿ ಹಲವೆಡೆ 3 ದಿನ ಧಾರಾಕಾರ ಮಳೆ, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us