Karnataka Rains: ಉತ್ತರ ಕನ್ನಡಕ್ಕೆ ಮಳೆಯ ರೆಡ್ ಅಲರ್ಟ್, ಬೆಂಗಳೂರು ಸೇರಿ ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ?
ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಕೂಲ್ ಆಗಿದೆ, ಚಳಿಗಾಲದ ಅನುಭವ ನೀಡುತ್ತಿದೆ. ಮೇ 25ರಿಂದ ಕರ್ನಾಟಕದಾದ್ಯಂತ ಮಳೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು, ಮೇ 22: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಇಂದು ಭಾರಿ ಮಳೆ(Rain)ಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮೇ 25ರಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್, ಅದಕ್ಕಿಂತ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಮಳೆಯಾದರೆ ಆರೆಂಜ್, ಅದಕ್ಕಿಂತಲೂ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ ಯೆಲ್ಲೋ ಅಲರ್ಟ್ ಘೋಷಿಸಲಾಗುತ್ತದೆ.
ಉಡುಪಿ, ಕುಮಟಾ, ಮಂಗಳೂರು, ಮುಂಡಗೋಡು, ಕದ್ರಾ, ಮುಲ್ಕಿ, ಕಾರವಾರ, ಜೋಯ್ಡಾ, ಬೆಳ್ತಂಗಡಿ, ಕಲಘಟಗಿಯಲ್ಲಿ ಭಾರಿ ಮಳೆಯಾಗಿದೆ. ಪುತ್ತೂರು, ಸುಳ್ಯ, ಕೊಟ್ಟಿಗೆಹಾರ, ಜಗಳೂರು, ಭಾಗಮಂಡಲ, ಯಲ್ಲಾಪುರ, ಉಪ್ಪಿನಂಗಡಿ, ಬೀದರ್, ಕೂಡಲಸಂಗಮ, ಗಂಗಾವತಿ, ಬಬಲೇಶ್ವರ, ಹಳಿಯಾಳ, ಕಿರವತ್ತಿ, ಮಾಣಿ, ನಾರಾಯಣಪುರ, ಇಳಕಲ್, ಆಲಮಟ್ಟಿ, ಬಾಳೆಹೊನ್ನೂರು, ಭಾಲ್ಕಿ, ಹುನಗುಂದ, ದಾವಣಗೆರೆಯಲ್ಲಿ ಮಳೆಯಾಗಿದೆ.
ಬಾದಾಮಿ, ಅಥಣಿ, ಹುಬ್ಬಳ್ಳಿ, ಇಂಡಿ, ಹುಬ್ಬಳ್ಳಿ, ಗಬ್ಬೂರು, ನಾಪೋಕ್ಲು, ಸೋಮವಾರಪೇಟೆ, ಚಿಕ್ಕಮಗಳೂರು, ರಾಯಲ್ಪಾಡು, ಹರಪನಹಳ್ಳಿ, ಹುಂಚದಕಟ್ಟೆ, ಗೌರಿಬಿದನೂರು, ನಾಯಕನಹಟ್ಟಿ, ಸರಗೂರು, ನೆಲಮಂಗಲ, ಶಿವಮೊಗ್ಗ, ಬೈಲಹೊಂಗಲ, ಧಾರವಾಡ, ಕಿತ್ತೂರು, ಹಾವೇರಿ, ಯಲಬುರ್ಗಾ, ಲೋಕಾಪುರ, ಕುಂದಗೋಳ, ಲೋಕಾಪುರದಲ್ಲಿ ಮಳೆಯಾಗಿದೆ.
ರಾಯಚೂರಿನಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗಾಳಿಯು ಗಂಟೆಗೆ 35 ಕಿ.ಮೀಯಿಂದ 45 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಕೊಂಕಣ, ಗೋವಾ, ಕೇರಳ, ಕರ್ನಾಟಕದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ಬೆಂಗಳೂರಿನ ಎಚ್ಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ








