Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ
ಮಳೆImage Credit source: Hyderabad News
Follow us
|

Updated on: Aug 01, 2024 | 7:41 AM

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅನಾಹುತಗಳನ್ನು ಸೃಷ್ಟಿಸಿದೆ. ಅದೇ ರೀತಿ ಮಳೆ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ.

ಆಗುಂಬೆ, ಮಾಣಿ, ಕ್ಯಾಸಲ್​ರಾಕ್, ಕಾರ್ಕಳ, ಉಪ್ಪಿನಂಗಡಿ, ಮಂಕಿ, ಪುತ್ತೂರು, ಕಮ್ಮರಡಿ, ಬೆಳ್ತಂಗಡಿ, ಪಣಂಬೂರು, ಮುಲ್ಕಿ, ಭಾಗಮಂಡಲ, ಮೂಡಿಗೆರೆ, ಧರ್ಮಸ್ಥಳ, ಕದ್ರಾ, ಕೊಲ್ಲೂರು, ಮಂಗಳೂರು, ಅಂಕೋಲಾ, ಶೃಂಗೇರಿಯಲ್ಲಿ ಮಳೆಯಾಗಿದೆ. ಲೋಂಡಾ, ತರೀಕೆರೆ, ಲಿಂಗನಮಕ್ಕಿ, ಕುಮಟಾ, ಜಯಪುರ, ಶಿರಾಲಿ, ಸುಳ್ಯ, ಕಳಸ, ಕೊಪ್ಪ, ನಾಪೊಕ್ಲು, ಕೊಟ್ಟಿಗೆಹಾರ, ಗೋಕರ್ಣ, ಕೋಟ, ಹುಂಚದಕಟ್ಟೆ, ಕಾರವಾರ, ಪೊನ್ನಂಪೇಟೆ, ತ್ಯಾಗರ್ತಿ, ಸೋಮವಾರಪೇಟೆ, ಎನ್​ಆರ್​ಪುರ, ಬನವಾಸಿ, ಹಾರಂಗಿ, ಕುಶಾಲನಗರ, ಹಳಿಯಾಳ, ಕೆಆರ್​ ನಗರ, ಕೂಡಲಸಂಗಮ, ಸೇಡಬಾಳ, ದಾವಣಗೆರೆ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!