Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ
ಮಳೆ
Image Credit source: Hyderabad News

Updated on: Aug 01, 2024 | 7:41 AM

ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅನಾಹುತಗಳನ್ನು ಸೃಷ್ಟಿಸಿದೆ. ಅದೇ ರೀತಿ ಮಳೆ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ.

ಆಗುಂಬೆ, ಮಾಣಿ, ಕ್ಯಾಸಲ್​ರಾಕ್, ಕಾರ್ಕಳ, ಉಪ್ಪಿನಂಗಡಿ, ಮಂಕಿ, ಪುತ್ತೂರು, ಕಮ್ಮರಡಿ, ಬೆಳ್ತಂಗಡಿ, ಪಣಂಬೂರು, ಮುಲ್ಕಿ, ಭಾಗಮಂಡಲ, ಮೂಡಿಗೆರೆ, ಧರ್ಮಸ್ಥಳ, ಕದ್ರಾ, ಕೊಲ್ಲೂರು, ಮಂಗಳೂರು, ಅಂಕೋಲಾ, ಶೃಂಗೇರಿಯಲ್ಲಿ ಮಳೆಯಾಗಿದೆ.
ಲೋಂಡಾ, ತರೀಕೆರೆ, ಲಿಂಗನಮಕ್ಕಿ, ಕುಮಟಾ, ಜಯಪುರ, ಶಿರಾಲಿ, ಸುಳ್ಯ, ಕಳಸ, ಕೊಪ್ಪ, ನಾಪೊಕ್ಲು, ಕೊಟ್ಟಿಗೆಹಾರ, ಗೋಕರ್ಣ, ಕೋಟ, ಹುಂಚದಕಟ್ಟೆ, ಕಾರವಾರ, ಪೊನ್ನಂಪೇಟೆ, ತ್ಯಾಗರ್ತಿ, ಸೋಮವಾರಪೇಟೆ, ಎನ್​ಆರ್​ಪುರ, ಬನವಾಸಿ, ಹಾರಂಗಿ, ಕುಶಾಲನಗರ, ಹಳಿಯಾಳ, ಕೆಆರ್​ ನಗರ, ಕೂಡಲಸಂಗಮ, ಸೇಡಬಾಳ, ದಾವಣಗೆರೆ, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಇಂದಿನಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿ ಮಳೆ ಜೋರು

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 26.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us