Karnataka Weather: ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಯೆಲ್ಲೋ ಅಲರ್ಟ್
ಇಂದು ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಷ್ಟೇ ಅಲ್ಲದೆ ಮುಂಗಾರು ಕರ್ನಾಟಕಕ್ಕೆ ಐದು ದಿನ ಮುಮಚಿತವಾಗಿಯೇ ಆಗಮಿಸಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಮಳೆಯಾಗಿದೆ. ಕರ್ನಾಟಕದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೇ 13: ಎರಡು ವಾರಗಳಿಂದ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿಗೆ ಮಳೆರಾಯನ ಆಗಮನವಾಗಿದೆ. ಸೋಮವಾರ ರಾತ್ರಿ ಒಂದು ಗಂಟೆಗಳ ಕಾಲ ಅಲ್ಲಲ್ಲಿ ಮಳೆ(Rain)ಸುರಿದಿದೆ. ಇಂದು ಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು, ಆಲಮಟ್ಟಿ, ಮಂಗಳೂರು, ಹುಣಸಗಿ, ಮುಲ್ಕಿ, ಗೌರಿಬಿದನೂರಿನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನಲ್ಲಿ ಇಂದು ಕೂಡ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಮೇ 13ರಿಂದ ಹೆಚ್ಚಲಿದೆ ಮಳೆ, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೀದರ್ನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷಗ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.








