AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಸೆ.21ರವರೆಗೂ ಮಳೆ

ಕರ್ನಾಟಕದಲ್ಲಿ ಮತ್ತೆ ಮಲೆ ಚುರುಕಾಗಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಲೆಯಾಗುತ್ತಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಉತ್ತರ ಒಳನಾಡಿನ ಈ ಜಿಲ್ಲೆಗಳಲ್ಲಿ ಸೆ.21ರವರೆಗೂ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Sep 15, 2025 | 7:24 AM

Share

ಬೆಂಗಳೂರು, ಸೆಪ್ಟೆಂಬರ್ 15: ಕರ್ನಾಟಕದಲ್ಲಿ ಮಳೆ(Rain) ಮುಂದುವರೆದಿದೆ, ಉತ್ತರ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಅಥಣಿ, ಮಹಾಲಿಂಗಪುರ, ಝಲ್ಕಿ, ತಾವರಗೇರಾ, ಗೋಕಾಕ್, ಬೀದರ್, ಕುಷ್ಟಗಿ, ಕಾರ್ಕಳ, ಗಂಗಾವತಿ, ಭಾಲ್ಕಿ, ತಿಡಗುಂಡಿ, ಸೇಡಬಾಳ, ರಬಕವಿ, ಮುದಗಲ್, ಮುದ್ದೇಬಿಹಾಳ, ಮಸ್ಕಿ, ಮಧುಗಿರಿ, ಹಿರಿಯೂರು, ಚಿತ್ತಾಪುರ್, ಭಾಗಮಂಡಲ, ಬೆಳಗಾವಿ, ಬಾದಾಮಿ, ಆನವಟ್ಟಿ, ಆಲಮಟ್ಟಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.

ಎಚ್​ಎಎಲ್​​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕೊಪ್ಪಳ, ವಿಜಯಪುರಕ್ಕೆ ಆರೆಂಜ್ ಅಲರ್ಟ್​, ಬೆಂಗಳೂರಿಗೆ ಯೆಲ್ಲೋ ಅಲರ್ಟ್​, ಕರ್ನಾಟಕದಾದ್ಯಂತ ಭಾರಿ ಮಳೆ

ಹೊನ್ನಾವರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 27.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ನೆಲದ ಮೇಲೆ ಕುಳಿತು ಉಪಹಾರ ಸೇವಿಸಿದ ವಿಜಯೇಂದ್ರ
ನೆಲದ ಮೇಲೆ ಕುಳಿತು ಉಪಹಾರ ಸೇವಿಸಿದ ವಿಜಯೇಂದ್ರ