Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆ

ಕರ್ನಾಟಕದ ಬಹುತೇಕ ಕಡೆ ಸೆಪ್ಟೆಂಬರ್ 12ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆ
ಮಳೆ
Image Credit source: Deccan Herald

Updated on: Sep 06, 2024 | 7:45 AM

ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 12ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.
ಶೃಂಗೇರಿ, ಕಾರ್ಕಳ, ಮಂಗಳೂರು, ಗೇರುಸೊಪ್ಪ, ಸಿದ್ದಾಪುರ, ಬೆಳ್ತಂಗಡಿ, ಕೋಟ, ಔರಾದ್, ಶಾಹಪುರ, ಜಯಪುರ, ಕಮ್ಮರಡಿ, ಕದ್ರಾ, ಸುಳ್ಯ, ಕ್ಯಾಸಲ್​ರಾಕ್, ಕೊಪ್ಪ, ಸಿಂದಗಿ, ಉಡುಪಿ, ಮುಲ್ಕಿ, ಶಿರಾಲಿ, ಮಾಣಿ, ಮಂಗಳೂರು, ಪುತ್ತೂರು, ಬಾದಾಮಿ, ಲೋಂಡಾ, ಸೋಮವಾರಪೇಟೆ, ಬಾಳೆಹೊನ್ನುರಿನಲ್ಲಿ ಮಳೆಯಾಗಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆ

ಹೊನ್ನಾವರದಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧಾರವಾಡದಲ್ಲಿ 27.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us