AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರಿಂದ ಭಾರಿ ಮಳೆ

ಕರ್ನಾಟಕದಾದ್ಯಂತ ಜುಲೈ 3ರಿಂದ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ..ಕಳಸ, ಸುಳ್ಯ, ಕಾರವಾರ, ಸೋಮವಾರಪೇಟೆ, ಪೊನ್ನಂಪೇಟೆ, ಜಯಪುರ, ಕುಂದಾಪುರ, ಜೋಯ್ಡಾ, ಶಿರಾಲಿ, ಹಳಿಯಾಳ, ಕುಮಟಾ, ಖಾನಾಪುರದಲ್ಲಿ ಮಳೆಯಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರಿಂದ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Jun 30, 2025 | 7:21 AM

Share

ಬೆಂಗಳೂರು, ಜೂನ್ 30: ಕರ್ನಾಟಕದಾದ್ಯಂತ ಮುಂಗಾರು ಬಿಡುವು ಪಡೆದಿದೆ. ಆಗಾಗ ಒಂದೊಂದು ಮಳೆ(Rain)ಯಾಗುತ್ತಿದ್ದು, ನಿರಂತರವಾಗಿ ಸುರಿಯುತ್ತಿಲ್ಲ. ಜುಲೈ 3ರ ಬಳಿಕ ಮತ್ತೆ ರಾಜ್ಯಾದ್ಯಂತ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಬಂಟವಾಳ, ಕ್ಯಾಸಲ್​​ರಾಕ್, ಭಾಗಮಂಡಲ, ಆಗುಂಬೆ, ಮಾಣಿ, ಕದ್ರಾ, ಪುತ್ತೂರು, ಮೂಡುಬಿದಿರೆ, ಶಕ್ತಿನಗರ, ಮಂಗಳೂರು, ಕಾರ್ಕಳ, ಬೆಳ್ತಂಗಡಿ, ಗೇರುಸೊಪ್ಪ, ಸಿದ್ದಾಪುರ, ಲೋಂಡಾ, ಯಲ್ಲಾಪುರ, ಕೊಟ್ಟಿಗೆಹಾರ, ನಾಪೋಕ್ಲು, ಕಮ್ಮರಡಿ, ಶೃಂಗೇರಿ, ಕಳಸ, ಸುಳ್ಯ, ಕಾರವಾರ, ಸೋಮವಾರಪೇಟೆ, ಪೊನ್ನಂಪೇಟೆ, ಜಯಪುರ, ಕುಂದಾಪುರ, ಜೋಯ್ಡಾ, ಶಿರಾಲಿ, ಹಳಿಯಾಳ, ಕುಮಟಾ, ಖಾನಾಪುರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆ, ಎಲ್ಲೆಲ್ಲಿ ರೆಡ್, ಆರೆಂಜ್​ ಅಲರ್ಟ್​?

ಬೆಳಗಾವಿ ಏರ್​ಪೋರ್ಟ್​​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು