Karnataka Rains: ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.

Karnataka Rains: ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್
ಬೆಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ ಸುರಿದ ಮಳೆ (ಸಂಗ್ರಹ ಚಿತ್ರ)

Updated on: May 18, 2024 | 3:09 PM

ಬೆಂಗಳೂರು, ಮೇ 18: ಕರ್ನಾಟಕದ (Karnataka) ಹಲವೆಡೆ ಮೇ 19ರಿಂದ 21 ರವರೆಗೆ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಭಾರಿ (Karnataka Rains) ಮಳೆಯಾದರೆ ಇನ್ನು ಕೆಲವಡೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೂರು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಾಗುವ ಪ್ರದೇಶಗಳ ಗರಿಷ್ಠ ತಾಪಮಾನದಲ್ಲಿ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಬಹುದು ಎಂದೂ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ 2023 ರ ಡಿಸೆಂಬರ್​ನಿಂದ ಈ ಏಪ್ರಿಲ್ ವರೆಗೆ ಮಳೆಯಾಗಿರಲಿಲ್ಲ. ಆದರೆ, ಮುಂದಿನ ಐದು ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಮತ್ತು ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.

ಯಾವೆಲ್ಲ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್​?

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಮೇ 21 ರವರೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವುದರೊಂದಿಗೆ ಗುಡುಗು, ಮಿಂಚು ಸಹಿತ 7 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಜೋರು, ಆರೆಂಜ್​ ಅಲರ್ಟ್​

ದಕ್ಷಿಣ ಮತ್ತು ಕರಾವಳಿ ಕರ್ನಾಟಕದ ಶೇ 75 ಕ್ಕಿಂತ ಹೆಚ್ಚು ಮತ್ತು ಉತ್ತರ ಒಳನಾಡಿನಲ್ಲಿ ಶೇ 25-50 ರಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂಬರುವ ದಿನಗಳಲ್ಲಿ ಗರಿಷ್ಠ ನಿರೀಕ್ಷಿತ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಾರದು ಎಂದೂ ಇಲಾಖೆ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sat, 18 May 24

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us