Karnataka Rains: ಇಂದಿನಿಂದ ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

|

Updated on: Jun 23, 2023 | 7:46 AM

ಇಂದಿನಿಂದ ಜೂನ್ 27ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಇಂದಿನಿಂದ ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ
ಮಳೆ
Image Credit source: Hindustan Times
Follow us on

ಇಂದಿನಿಂದ ಜೂನ್ 27ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಳ್ಳಾರಿ, ಕೊಡಗು, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮಂಕಿ, ಬೆಳ್ತಂಗಡಿ, ಹಿಡಿಯೂರು, ಕುಂದಾಪುರ, ವಿರಾಜಪೇಟೆ, ಮಂಡ್ಯ, ಕೋಟ, ಸಿರಾ, ಮಾಣಿ, ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಟ್ಟಿಗೆಹಾರ, ತಿಪಟೂರು, ಗುಬ್ಬಿ, ಉಡುಪಿ, ಹಾಸನ, ಹೆಸರಘಟ್ಟ, ಮೂಡಿಗೆರೆ, ಸಿದ್ದಾಪುರ, ಪಣಂಬೂರು, ಮುಲ್ಕಿ, ಮಂಗಳೂರು, ಗೋಕರ್ಣ, ಕಡೂರು, ಕಳಸ, ಜಯಪುರ, ಹುಣಸೂರು, ಸಾಲಿಗ್ರಾಮ, ಚಿಕ್ಕಮಗಳೂರು, ಉತ್ತರಹಳ್ಳಿ, ಶ್ರವಣಬೆಳಗೊಳ, ದಾವಣಗೆರೆ, ಹೊಸದುರ್ಗ, ಚಾಮರಾಜನಗರ, ತುಮಕೂರು, ಸಂಡೂರಿನಲ್ಲಿ ಮಳೆಯಾಗಿದೆ.

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರಾವಳಿಯಲ್ಲಿ ಜೂನ್​ 27ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಿಪೋರ್​ಜಾಯ್ ಚಂಡಮಾರುತವು ತೇವಾಂಶ ಭರಿತ ಮೋಡಗಳನ್ನು ಸೆಳೆದುಕೊಂಡ ಪರಿಣಾಮ, ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣದ ಜತೆಗೆ ಅಗಾಗ ಮಳೆಯಾಗುತ್ತಿದೆ.

ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನಲ್ಲೂ ಮಾರುತಗಳು ಪ್ರವೇಶಿಸಿದ್ದು, ಜೂ 25ರಿಂದ ಈ ಭಾಗದಲ್ಲಿ ಜೋರಾಗಿ ಮಳೆಯಾಗಲಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ