Karnataka Rains: ಗಣೇಶ ಚತುರ್ಥಿಯಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಕರ್ನಾಟಕದ ವಿವಿಧೆಡೆ ಮುಂದಿನ ಐದು ದಿನಗಳ ಕಾಲ ಮಳೆ ಕಡಿಮೆ ಇರಲಿದ್ದು, ಚೌತಿಯಿಂದ ಮತ್ತೆ ಹೆಚ್ಚಾಗಲಿದೆ. ಕರ್ನಾಟಕದಾದ್ಯಂತ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ ಕಡಿಮೆಯಾಗಲಿದ್ದು, ಚೌತಿಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಗಣೇಶ ಚತುರ್ಥಿಯಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಮಳೆ
Image Credit source: PTI

Updated on: Aug 22, 2025 | 7:59 AM

ಬೆಂಗಳೂರು, ಆಗಸ್ಟ್​ 22: ಕರ್ನಾಟಕದಾದ್ಯಂತ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ(Rain) ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕ್ಯಾಸಲ್​​ರಾಕ್, ಕದ್ರಾ, ಗೇರುಸೊಪ್ಪ, ಆಗುಂಬೆ, ಯಲ್ಲಾಪುರ, ಉಡುಪಿ, ಮಂಕಿ, ಲೋಂಡಾ, ಕುಂದಾಪುರ, ಕುಮಟಾ, ಕಮ್ಮರಡಿ, ಹೊನ್ನಾವರ, ಸಿದ್ದಾಪುರ, ಶಿರಾಲಿ, ಕೊಟ್ಟಿಗೆಹಾರ, ಕೊಪ್ಪ, ಖಾನಾಪುರ, ಕಾರವಾರ, ಹುಂಚದಕಟ್ಟೆ, ಗೋಕರ್ಣ, ಶೃಂಗೇರಿ, ಸೋಮವಾರಪೇಟೆ, ಸೈದಾಪುರ, ಪುತ್ತೂರು, ನಿಪ್ಪಾಣಿ, ಮುಂಡಗೋಡು, ಮುಲ್ಕಿ, ಮೂಡುಬಿದಿರೆ, ಜೋಯ್ಡಾ, ಜಯಪುರ, ಹಳಿಯಾಳ, ಗುತ್ತಲ್, ಗೌರಿಬಿದನೂರು, ಧರ್ಮಸ್ಥಳ, ಚಿತ್ತಾಪುರ, ಭಾಗಮಂಡಲ, ಬೆಳ್ತಂಗಡಿ, ಬೆಳಗಾವಿ, ಬನವಾಸಿಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 23.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:18 am, Fri, 22 August 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us