Karnataka Rains: ಕರ್ನಾಟಕದ ಕರಾವಳಿ, ಬೆಂಗಳೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.9ರವರೆಗೂ ಮಳೆ

ಫೆಂಗಲ್ ಚಂಡಮಾರುತ ದುರ್ಬಲವಾಗಿದ್ದರೂ ಅದರ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ, ಕರ್ನಾಟಕದ ಹಲವೆಡೆ ಡಿಸೆಂಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೂ ಕರ್ನಾಟಕದಾದ್ಯಂತ ಮಳೆಗೆ ಕಾರಣವಾಗುತ್ತಿದೆ. ಕರ್ನಾಟಕದ ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದ ಕರಾವಳಿ, ಬೆಂಗಳೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.9ರವರೆಗೂ ಮಳೆ
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Dec 05, 2024 | 7:41 AM

ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೂ ಕರ್ನಾಟಕದಾದ್ಯಂತ ಮಳೆಗೆ ಕಾರಣವಾಗುತ್ತಿದೆ. ಕರ್ನಾಟಕದ ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ನಗರದಲ್ಲಿ 25.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು, ಗೌರಿಬಿದನೂರು, ಕಾರವಾರ, ಮಳವಳ್ಳಿ, ಮಿಡಿಗೇಶಿ, ಸೋಮವಾರಪೇಟೆ, ಗುಬ್ಬಿ, ಎಂಎಂಹಿಲ್ಸ್​, ಮಂಗಳೂರಿನಲ್ಲಿ ಮಳೆಯಾಗಿದೆ. ಹೊನ್ನಾವರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ನಿಲ್ಲದ ವರುಣನ ಆರ್ಭಟ; ಬೆಂಗಳೂರು, ಕರಾವಳಿ, ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆ

ಹವಾಮಾನ ವರದಿ ಪ್ರಕಾರ, ದಕ್ಷಿಣ ಕನ್ನಡದ ಮುಲ್ಕಿಯಲ್ಲಿ ಅತೀ ಹೆಚ್ಚು 26 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಮಂಗಳೂರಿನಲ್ಲಿ 19, ಪಣಂಬೂರು 18, ಕಾರ್ಕಳ 15, ಉಡುಪಿ 14, ಕೋಟ 13, ಭಾಗಮಂಡಲ, ಮದ್ದೂರು ಹಾಗೂ ಬೆಳ್ಳೂರಿನಲ್ಲಿ ತಲಾ 9, ಹುಣಸೂರು, ನಾಪೋಕ್ಲು ತಲಾ 6, ಪುತ್ತೂರು, ಮಾಣಿ, ಸುಳ್ಯ, ಸರಗೂರು ಮಂಡ್ಯದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.

ಬೀದರ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ