Karnataka Weather: ಕರ್ನಾಟಕದಾದ್ಯಂತ ಮಳೆಯ ಅಬ್ಬರ, ಇಂದು ಎಲ್ಲೆಲ್ಲಿ ಹೆಚ್ಚು ಮಳೆಯಾಗಲಿದೆ?

ಇಂದು ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ವರುಣನ ಆರ್ಭಟ ತುಸು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಹಲವೆಡೆ ಮಲೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಮಳೆಯ ಅಬ್ಬರ,  ಇಂದು ಎಲ್ಲೆಲ್ಲಿ ಹೆಚ್ಚು ಮಳೆಯಾಗಲಿದೆ?
ಮಳೆ
Image Credit source: PTI

Updated on: Apr 29, 2025 | 7:20 AM

ಬೆಂಗಳೂರು, ಏಪ್ರಿಲ್ 29: ಕರ್ನಾಟಕದಾದ್ಯಂತ ಮಳೆ(Rain)ಯ ಅಬ್ಬರ ಹೆಚ್ಚಾಗಿದೆ. ಇಂದು ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್​ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗುರುಮಿಟ್ಕಲ್, ಕೋಲಾಪುರ, ಶಿರಹಟ್ಟಿ, ಸುಳ್ಯ, ಮುಂಡಗೋಡು, ಚಿಟಗುಪ್ಪ, ಬನವಾಸಿ, ಮಾನ್ವಿ, ಧಾರವಾಡ, ಲಕ್ಷ್ಮೇಶ್ವರ, ಹೊಸಕೋಟೆ, ಕಳಸ, ಕಿರವತ್ತಿ, ಯಲ್ಲಾಪುರ, ಯಲಬುರ್ಗ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಬಿಳಿಗಿ, ಚಿಂಚೋಳಿ, ಕುರ್ಡಿ, ಬಸವನ ಬಾಗೇವಾಡಿ, ಇಳಕಲ್, ಹಿರಿಯೂರು, ಪರಶುರಾಂಪುರ, ಮಾಗಡಿ, ಹಾರಂಗಿ, ಗುಬ್ಬಿ, ಬಾಳೆಹೊನ್ನೂರು, ಶೃಂಗೇರಿಯಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಇಂದು ಬೆಂಗಳೂರು ಸೇರಿ ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೆಳಗಾವಿ ನಗರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 43.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us