AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಜುಲೈ 17ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rains: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​
ಮಳೆ Image Credit source: PTI
ನಯನಾ ರಾಜೀವ್
|

Updated on: Jul 13, 2025 | 7:55 AM

Share

ಬೆಂಗಳೂರು, ಜುಲೈ 13: ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ(Rain)ಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಶಿರಾಲಿ, ಹೊನ್ನಾವರ, ಕುಂದಾಪುರ, ಮಂಗಳೂರು, ಗೋಕರ್ಣ, ಕುಮಟಾ, ಮಂಗಳೂರು, ಆಗುಂಬೆ, ಕಾರ್ಕಳ, ಉಡುಪಿ, ಅಂಕೋಲಾ, ಮುಲ್ಕಿ, ಸಿದ್ದಾಪುರ, ಕ್ಯಾಸಲ್​ರಾಕ್, ಕಾರವಾರ, ಮಾಣಿ, ಕೊಟ್ಟಿಗೆಹಾರ, ಕಮ್ಮರಡಿ, ಮೂಡುಬಿದಿರೆ, ಬಂಟವಾಳ, ಪುತ್ತೂರು, ಶಕ್ತಿನಗರ, ಬೆಳ್ತಂಗಡಿ, ಶೃಂಗೇರಿ, ಭಾಗಮಂಡಲ, ಹುಂಚದಕಟ್ಟೆ, ಕಳಸ, ಬಾಳೆಹೊನ್ನೂರು, ಕೊಪ್ಪ, ಸುಳ್ಯ, ಕದ್ರಾ, ಶಿವಮೊಗ್ಗ, ಬನವಾಸಿ, ಧರ್ಮಸ್ಥಳ, ಯಲ್ಲಾಪುರ, ಭದ್ರಾವತಿ, ಎನ್​ಆರ್​ ಪುರ, ಕೃಷ್ಣರಾಜಸಾಗರ, ನಾಪೋಕ್ಲು, ಚನ್ನಗಿರಿ, ಹೊನ್ನಾಳಿ, ಹೊಸದುರ್ಗ, ತಿಪಟೂರು, ಅಜ್ಜಂಪುರ, ಗುಬ್ಬಿ, ಅಥಣಿ, ಸಿಂದಗಿ, ಲೋಂಡಾ, ಕೆಂಭಾವಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಳೆಯಾಗಿದೆ. ಎಚ್​ಎಎಲ್​​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲ, ಕರಾವಳಿಯಲ್ಲಿ ಮಳೆ ಸಾಧ್ಯತೆ

ಹೊನ್ನಾವರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ